ಕೃಷಿ ಮಸೂದೆಯನ್ನು ವಿರೋಧಿಸಿ ಅನ್ನದಾತರು ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. 32 ಕ್ಕೂ ಹೆಚ್ಚು ರೈತ ಸಂಘಟನೆಗಳು ಈ ಹೋರಾಟದಲ್ಲಿ ಭಾಗಿಯಾಗಿವೆ.
ಬೆಂಗಳೂರು (ಸೆ. 25): ಕೃಷಿ ಮಸೂದೆಯನ್ನು ವಿರೋಧಿಸಿ ಅನ್ನದಾತರು ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. 32 ಕ್ಕೂ ಹೆಚ್ಚು ರೈತ ಸಂಘಟನೆಗಳು ಈ ಹೋರಾಟದಲ್ಲಿ ಭಾಗಿಯಾಗಿವೆ. ದಾವಣಗೆರೆಯಲ್ಲಿ ರೈತರು ಹೆದ್ದಾರಿ ತಡೆದು, ಟೈರ್‌ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ಧಾರೆ.
'ನಮಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಸುತ್ತೇವೆ' ಎಂದು ಘೋಷಣೆ ಕೂಗಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ. ಹೆದ್ಧಾರಿಗಳನ್ನು ತಡೆದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.