ಅಮಿತ್ ಶಾ ಹೇಳಿಕೆ ಸಾಂಸ್ಕೃತಿಕ ಭಯೋತ್ಪಾದನೆ ಎಂದ ಸಿದ್ದರಾಮಯ್ಯ

ಅಮಿತ್ ಶಾ ಹೇಳಿಕೆ ಸಾಂಸ್ಕೃತಿಕ ಭಯೋತ್ಪಾದನೆ ಎಂದ ಸಿದ್ದರಾಮಯ್ಯ

Published : Apr 08, 2022, 08:02 PM IST

ದೇಶದ ಭಿನ್ನ ರಾಜ್ಯಗಳ ನಾಗರೀಕರು ಇಂಗ್ಲೀಷ್ ನ ಬದಲಾಗಿ ಹಿಂದಿಯಲ್ಲಿ ವ್ಯವಹರಿಸಬೇಕು ಎಂದು ಅಮಿತ್ ಶಾ ಹೇಳಿರುವ ಮಾತು ಸಾಂಸ್ಕೃತಿಕ ಭಯೋತ್ಪಾದನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಟೀಕಿಸಿದ್ದಾರೆ.

ಬೆಂಗಳೂರು (ಏ. 8):  ದೇಶದಲ್ಲಿ ಇಂಗ್ಲೀಷ್ ಗಿಂತ (English) ಹೆಚ್ಚಾಗಿ ಭಾರತೀಯ ಭಾಷೆಯಾಗಿರುವ ಹಿಂದಿಯನ್ನು (Hindi) ಎರಡು ರಾಜ್ಯದವರು ವ್ಯವಹರಿಸುವಾಗ ಬಳಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Union Home Minister Amit Shah) ಹೇಳಿರುವ ಮಾತಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ (Siddaramaiah ) ಕಿಡಿಕಾರಿದ್ದಾರೆ. ಅಮಿತ್ ಶಾ ಹೇಳಿಕೆ ಸಾಂಸ್ಕೃತಿಕ ಭಯೋತ್ಪಾದನೆ ಎಂದು ಸಿದ್ಧರಾಮಯ್ಯ ಟೀಕೆ ಮಾಡಿದ್ದಾರೆ.

ಗೃಹ ಸಚಿವರ ಮಾತುಗಳು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾದವಾಗಿವೆ. ದೇಶದ ಬಹುತೇಕ ರಾಜ್ಯಗಳಲ್ಲಿರುವ ಆಯಾ ರಾಜ್ಯದ ಮಾತೃಭಾಷೆಗಳಿಗೆ ಮಾಡಿರುವ ಅವಮಾನ ಇದಾಗಿದೆ. ಅನಗತ್ಯ ಘರ್ಷಣೆಗಳಿಗೆ ಎಡೆ ಮಾಡಿಕೊಡುವ ಬೇಜವಾಬ್ದಾರಿ ಹೇಳಿಕೆ ಇದು ಎಂದು ಕಿಡಿಕಾರಿದ್ದಾರೆ.

ಹಿಂದಿ ಬಳಸಿ ಎಂದು ಅಮಿತ್ ಶಾ ಹೊರಡಿಸಿದ ಫರ್ಮಾನು ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಅಮಿತ್ ಶಾ ತಕ್ಷಣವೇ ಈ ಮಾತುಗಳನ್ನು ಹಿಂಪಡೆದುಕೊಳ್ಳಬೇಕು. ಸ್ವಾಭಿಮಾನಿ ಕನ್ನಡಿಗನಾಗಿ ಈ ಹೇಳಿಕೆಯನ್ನು ನಾನು ಖಂಡಿಸುತ್ತೇನೆ.ಹಿಂದಿ, ಇಂಗ್ಲೀಷ್, ತಮಿಳು,‌ಮಲೆಯಾಳಿ, ಗುಜರಾತಿ ಸೇರಿದಂತೆ  ಯಾವ ಭಾಷೆಗೂ ನಾವು ವಿರೋಧಿಗಳಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ. ಯಾವುದೇ ಒಂದು ಭಾಷೆಯನ್ನು ಹೇರಲು ಹೊರಟರೆ ಸಹಿಸಲು ಸಾಧ್ಯ ಇಲ್ಲ ಎಂದು ಸಿದ್ಧರಾಮಯ್ಯ ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more