Govindaraj S | Published: Jan 29, 2025, 11:17 PM IST
ಬೆಂಗಳೂರು (ಜ.29): ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ, ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ಕಾರ್ಯಕರ್ತೆಯರು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ಹೊರಹಾಕಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ ₹25 ಸಾವಿರ, ಸಹಾಯಕಿಯರಿಗೆ ₹12 ಸಾವಿರ ಕನಿಷ್ಠ ವೇತನ ನೀಡಬೇಕು. ಕಾರ್ಯಕರ್ತೆಯರನ್ನು ‘ಸಿ’ ದರ್ಜೆ ಹಾಗೂ ಸಹಾಯಕಿಯರನ್ನು ‘ಡಿ’ ದರ್ಜೆ ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಎಂದು ಆಗ್ರಹಿಸಿದರು. ಹೆಚ್ಚಿನ ಮಾಹಿತಿಗೆ ಈ ಕಂಪ್ಲೀಟ್ ಕರ್ನಾಟಕ ವಿಡಿಯೋವನ್ನು ವೀಕ್ಷಿಸಿ.