ಫ್ಯಾಮಿಲಿ ಪೊಲಿಟಿಕ್ಸ್ ಎಲ್ರೂ ಮಾಡ್ತಾರೆ: ಅನಿತಾ ಕುಮಾರಸ್ವಾಮಿ!

Mar 5, 2019, 7:31 PM IST

ಮದ್ದೂರು(ಮಾ.05): ದೇವೇಗೌಡ ಕುಟುಂಬ ಎಂದೂ ಕೂಡ ಹಿಂಬಾಗಿಲ ರಾಜಕಾರಣ ಮಾಡಿಲ್ಲ ಎಂದು ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ ಕ್ಷೇತ್ರದಿಂದ ಮಗ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಕುರಿತು ಕೇಳಿದ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದ ಅವರು, ಕುಟುಂಬ ರಾಜಕಾರಣ ಎಲ್ಲಿಲ್ಲ ಹೇಳಿ ಎಂದು ಮರುಪ್ರಶ್ನೆ ಹಾಕಿದರು. ಯಡಿಯೂರಪ್ಪ, ಸಿದ್ದರಾಮಯ್ಯ ಮಕ್ಕಳು ರಾಜಕೀಯದಲ್ಲಿ ಇಲ್ವಾ ಎಂದು ಕೇಳಿದ ಅನಿತಾ ಕುಮಾರಸ್ವಾಮಿ, ನಿಖಿಲ್ ಸ್ಪರ್ಧೆಯನ್ನು ಕುಟುಂಬ ರಾಜಕಾರಣ ಅನ್ನೋದು ಯಾಕೆ ಎಂದು ಪ್ರಶ್ನಿಸಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...