'ನೂರಕ್ಕೆ ನೂರರಷ್ಟು ಮತಾಂತರ ನಿಷೇಧ ಕಾಯ್ದೆಯನ್ನು (Anti Conversion Bill) ನಾವು ಜಾರಿಗೆ ತರುತ್ತೇವೆ. ಬಲವಂತದ ಮತಾಂತರಕ್ಕೆ ನಮ್ಮ ವಿರೋಧವಿದೆ. ಕಾಂಗ್ರೆಸ್‌ಗೆ ಇಷ್ಟವಿಲ್ಲದಿದ್ರೆ ಬಹಿಷ್ಕರಿಸಿ ಹೊರನಡೆಯಬೇಕು' ಎಂದು ಬಿಎಸ್‌ವೈ ಹೇಳಿದ್ದಾರೆ.
ಬೆಂಗಳೂರು (ಡಿ. 22): ರಾಜ್ಯದಲ್ಲಿ ಒತ್ತಾಯ ಅಥವಾ ಆಮಿಷವೊಡ್ಡಿ ಮತಾಂತರ ಮಾಡುವುದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕನಿಷ್ಠ 3 ರಿಂದ 10 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲು ಅವಕಾಶ ಕಲ್ಪಿಸುವ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ-2021’ (Anti Conversion Bill) ಅನ್ನು ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ಮಂಡಿಸಲಾಯಿತು.ಕಾರ್ಯ ಕಲಾಪ ಪಟ್ಟಿ ಪ್ರಸ್ತಾಪಿಸದೆ ಏಕಾಏಕಿ ವಿಧೇಯಕವನ್ನು ಪರ್ಯಾಲೋಚನೆಗೆ ಮಂಡನೆ ಮಾಡಿದ್ದಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
'ನೂರಕ್ಕೆ ನೂರರಷ್ಟು ಮತಾಂತರ ನಿಷೇಧ ಕಾಯ್ದೆಯನ್ನು ನಾವು ಜಾರಿಗೆ ತರುತ್ತೇವೆ. ಬಲವಂತದ ಮತಾಂತರಕ್ಕೆ ನಮ್ಮ ವಿರೋಧವಿದೆ. ಕಾಂಗ್ರೆಸ್‌ಗೆ ಇಷ್ಟವಿಲ್ಲದಿದ್ರೆ ಬಹಿಷ್ಕರಿಸಿ ಹೊರನಡೆಯಬೇಕು' ಎಂದು ಬಿಎಸ್‌ವೈ ಹೇಳಿದ್ದಾರೆ.