ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Assembly Election 2023) ಸಿದ್ದರಾಮಯ್ಯ (Siddaramaiah) ಅವರಿಗೆ ಸ್ಪರ್ಧಿಸಲು ತಮ್ಮ ಕ್ಷೇತ್ರ ಬಿಟ್ಟುಕೊಡಲು ಸಿದ್ಧರಿರುವುದಾಗಿ ಕಾಂಗ್ರೆಸ್‌ನ ಚಾಮರಾಜನಗರ (Chamarajanagar) ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿಹಾಗೂ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಘೋಷಿಸಿದ್ದಾರೆ.
ಬೆಂಗಳೂರು (ಡಿ. 12): ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ ಎಲ್ಲಿಂದ.? ಎಂದು ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Assembly Election 2023) ಸಿದ್ದರಾಮಯ್ಯ (Siddaramaiah) ಅವರಿಗೆ ಸ್ಪರ್ಧಿಸಲು ತಮ್ಮ ಕ್ಷೇತ್ರ ಬಿಟ್ಟುಕೊಡಲು ಸಿದ್ಧರಿರುವುದಾಗಿ ಕಾಂಗ್ರೆಸ್‌ನ ಚಾಮರಾಜನಗರ (Chamarajanagar) ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿಹಾಗೂ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಘೋಷಿಸಿದ್ದಾರೆ.
ಚಾಮರಾಜನಗರ, ಕೊಪ್ಪಳದ ಬೆನ್ನಲ್ಲೇ ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಳ್ಳಾರಿಯಿಂದಲೂ ಮುಂದಿನ ವಿಧಾನಸಭೆಗೆ ಸ್ಪರ್ಧಿಸುವಂತೆ ಆಹ್ವಾನ ಬಂದಿದೆ. ಬಳ್ಳಾರಿಯಿಂದ ಸ್ಪರ್ಧೆ ಮಾಡಿದರೆ ರತ್ನಕಂಬಳಿ ಹಾಕಿ ಸ್ವಾಗತಿಸುತ್ತೇವೆ ಎಂದು ಗ್ರಾಮೀಣ ಶಾಸಕ ಬಿ.ನಾಗೇಂದ್ರ ಹೇಳಿದ್ದಾರೆ. ಹಾಗಾದರೆ ಸಿದ್ದು ಸ್ಪರ್ಧೆ ಎಲ್ಲಿಂದ.?