ಸಿಲಿಕಾನ್ ಸಿಟಿಯಲ್ಲಿ ಗುಂಡಿಗಳಿಗೆ ಬ್ರೇಕ್ ಬೀಳುತ್ತಿಲ್ಲ. ಅರ್ಧಂಬರ್ಧ ಕಾಮಗಾರಿಯಿಂದ ಜನ ಬೇಸತ್ತಿದ್ದಾರೆ. ಮಲ್ಲೇಶ್ವರಂನಲ್ಲಿ ಜನ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ಗುಂಡಿಗಳಿಗೆ ಪೂಜೆ ಮಾಡಿ, ಹೂವಿನ ಹಾರಗಳನ್ನು ಹಾಕಿ ಪ್ರತಿಭಟಿಸಿದ್ದಾರೆ.
ಬೆಂಗಳೂರು (ಮಾ. 13): ಸಿಲಿಕಾನ್ ಸಿಟಿಯಲ್ಲಿ ಗುಂಡಿಗಳಿಗೆ ಬ್ರೇಕ್ ಬೀಳುತ್ತಿಲ್ಲ. ಅರ್ಧಂಬರ್ಧ ಕಾಮಗಾರಿಯಿಂದ ಜನ ಬೇಸತ್ತಿದ್ದಾರೆ. ಮಲ್ಲೇಶ್ವರಂನಲ್ಲಿ ಜನ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ಗುಂಡಿಗಳಿಗೆ ಪೂಜೆ ಮಾಡಿ, ಹೂವಿನ ಹಾರಗಳನ್ನು ಹಾಕಿ ಪ್ರತಿಭಟಿಸಿದ್ದಾರೆ.
ರಸ್ತೆ ಗುಂಡಿಗಳಿಗೆ ಬ್ಯಾರಿಕೇಡ್ ಇಟ್ಟಿದ್ದಾರೆ, ರಾತ್ರಿ ಹೊತ್ತು ಇಲ್ಲಿ ಸ್ಟ್ರೀಟ್ ಲೈಟ್ ಇಲ್ಲ. ನಾವು ಸಾಕಷ್ಟು ಬಾರಿ ದೂರು ಕೊಟ್ಟಿದ್ದೇವೆ. ಆದರೂ ಕ್ರಮ ತೆಗೆದುಕೊಳ್ಳುತ್ತಿಲ್ಲ, ಧೂಳು ತಿಂದು ತಿಂದು ಸಾಕಾಗಿದೆ ' ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.