ರಾಜ್ಯಪಾಲರಿಂದ ಸುಳ್ಳು ಹೇಳಿಸುವ ಕೆಲಸ ಮಾಡಿದ್ದಾರೆ: ಬಸವರಾಜ ಬೊಮ್ಮಾಯಿ

ರಾಜ್ಯಪಾಲರಿಂದ ಸುಳ್ಳು ಹೇಳಿಸುವ ಕೆಲಸ ಮಾಡಿದ್ದಾರೆ: ಬಸವರಾಜ ಬೊಮ್ಮಾಯಿ

Published : Feb 12, 2024, 03:05 PM ISTUpdated : Feb 12, 2024, 03:06 PM IST

ಸರ್ಕಾರ ರಾಜ್ಯಪಾಲರಿಂದ ಸುಳ್ಳುಗಳನ್ನು ಹೇಳಿಸಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 
 

ಬೆಂಗಳೂರು: ನಮ್ಮ ಕಾಲದಲ್ಲಿ‌‌ ಜಾರಿಗೆ ತಂದ ಯೋಜನೆಗಳನ್ನು ತಮ್ಮ ಸಾಧನೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraja Bommai) ಹೇಳಿದ್ದಾರೆ. ಇಂದು ಆರಂಭವಾದ ಜಂಟಿ ಅಧಿವೇಶನದಲ್ಲಿ(Session) ರಾಜ್ಯಪಾಲರ ಭಾಷಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಇಂತಹ ಸಪ್ಪೆ, ನಿರಾಸೆಯ ಭಾಷಣ ಯಾವತ್ತೂ ಕೇಳಿರಲಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿರುವ ಜನವಿರೊಧಿ ಸರ್ಕಾರ ಇರುವುದನ್ನು ತೋರಿಸುತ್ತದೆ.‌ ರಾಜ್ಯಪಾಲರ(Governor) ಭಾಷಣದಲ್ಲಿ ಸರ್ಕಾರ ಯಾವುದೆ ವಿಚಾರದಲ್ಲಿ ಸಾಧನೆ ಮಾಡಿರುವುದು ಕಾಣಿಸುವುದಿಲ್ಲ. ನಾವು ಮಾಡಿರುವ ಯೋಜನೆಗಳನ್ನು ತಮ್ಮ ಸಾಧನೆ ಎಂದು ಹೇಳಿಕೊಂಡಿದ್ದಾರೆ. ಜಲಜೀವನ್ ಮಿಷನ್, ಬಡವರಿಗೆ ಮನೆ‌ ನಿರ್ಮಾಣ ಎಲ್ಲವೂ ನಮ್ಮ ಯೋಜನೆಗಳು ಹುಬ್ಬಳ್ಳಿಯಲ್ಲಿ ಜಯದೇವ ಆಸ್ಪತ್ರೆ ನಮ್ಮ ಅವಧಿಯಲ್ಲಿ ಆರಂಭಿಸಿಧ್ದೇವೆ ಅದನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಂಡಿದ್ದಾರೆ‌ ಎಂದು ಹೇಳಿದರು. ಧರ್ಮದ ವಿಚಾರದಲ್ಲಿ ಸಂವಿಧಾನದಲ್ಲಿ ಎಲ್ಲ ಧರ್ಮಗಳನ್ನು ಸಮಾನವಾಗಿ ಕಾಣುವಂತೆ ಹೇಳಿದೆ. ಆದರೆ, ಇವರು ಒಂದೇ ಧರ್ಮವನ್ನು ತುಷ್ಟೀಕರಣ ಮಾಡುವ ಕೆಲಸ ಮಾಡುತ್ತಾರೆ ಎಂದು ಆರೋಪಿಸಿದರು.

ಇದನ್ನೂ ವೀಕ್ಷಿಸಿ:  Karnataka Budget: ಸರ್ಕಾರದ ವಿರುದ್ಧ ‘ಮೈತ್ರಿ’ ಅಸ್ತ್ರ: ಗದ್ದಲದ ನಡುವೆಯೇ ರಾಜ್ಯ ಬಜೆಟ್‌ ಮಂಡನೆಗೆ ಸಜ್ಜು !

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!