ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ರಾಯಚೂರು ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಪ್ರವಾಹ ಭೀತಿ ನಿರ್ಮಾಣವಾಗಿದೆ. ನಾರಾಯಣಪುರದ ಬಸವಸಾಗರ ಜಲಾಶಯ ಭರ್ತಿಯಾಗಿದೆ.
ರಾಯಚೂರು (ಆ. 17): ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ರಾಯಚೂರು ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಪ್ರವಾಹ ಭೀತಿ ನಿರ್ಮಾಣವಾಗಿದೆ. ನಾರಾಯಣಪುರದ ಬಸವಸಾಗರ ಜಲಾಶಯ ಭರ್ತಿಯಾಗಿದೆ. ಜಲಾಶಯದಿಂದ ಕೃಷ್ಣ ನದಿಗೆ 2.60 ಲಕ್ಷ ಕ್ಯೂಸೆಕ್ ನೀರನ್ನು ಬಿಡಲಾಗಿದೆ. ಈಗಾಗಲೇ ಲಿಂಗಸೂಗೂರು- ಶೀಲಹಳ್ಳಿ ನಡುವಿನ ರಸ್ತೆ ಸಂಚಾರ ಬಂದ್ ಆಗಿದೆ. ದೇವದುರ್ಗ ತಾಲೂಕಿನ ಹೂವಿನಹಡಗಿ ಸೇತುವೆ ಮುಳುಗಡೆಯಾಗಿದೆ.