Aug 28, 2020, 3:40 PM IST
ಬೆಂಗಳೂರು (ಆ. 28): ಬೆಳಗಾವಿಯಲ್ಲಿ ರಾಯಣ್ಣ ಮೂರ್ತಿ ಸ್ಥಾಪನೆ ವಿವಾದದ ಬಗ್ಗೆ ಈಗಾಗಲೇ ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ. ಬೆಳಗಾವಿ ಉಸ್ತುವಾರಿ ಸಚಿವರ ಜೊತೆ ಸಭೆ ನಡೆಸಿ, ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಸೂಚನೆ ನೀಡಿದ್ದಾರೆ.
ನಾನು ಕೂಡಾ ಬೆಳಗಾವಿ ಕಮಿಷನರ್ ಜೊತೆ ಮಾತನಾಡಿದ್ದೇನೆ. ಶಾಸಕರು, ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಎರಡೂ ಕಡೆಯವರ ಮುಖಂಡರ ಜೊತೆ ಸಭೆ ನಡೆಸಿ ಪ್ರತಿಭಟನೆಯನ್ನು ಮುಕ್ತಾಯಗೊಳಿಸುತ್ತಾರೆ ಎಂದು ಬೊಮ್ಮಾಯಿ ಹೇಳಿದ್ದಾರೆ.