ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್

ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್

Published : Jan 07, 2025, 08:52 PM IST

ಬೆಂಗಳೂರಿನಲ್ಲಿ ಎಂಟು ತಿಂಗಳ ಮಗುವಿಗೆ ಚೀನಾದ HMPV ವೈರಸ್ ಪತ್ತೆಯಾಗಿದ್ದು, ಚಿಕಿತ್ಸೆ ನಂತರ ಮಗು ಸಂಪೂರ್ಣವಾಗಿ ಚೇತರಿಸಿಕೊಂಡಿದೆ. ಮಗುವಿನಲ್ಲಿ ಯಾವುದೇ ಗಂಭೀರ ಲಕ್ಷಣಗಳು ಕಂಡುಬಂದಿಲ್ಲ ಮತ್ತು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಬೆಂಗಳೂರಿನ 8 ತಿಂಗಳ ಮಗುವಿಗೆ ಕಾಣಿಸಿಕೊಂಡಿದ್ದ ಚೀನಾದ ಹೆಚ್‌ಎಂಪಿ ವೈರಸ್ ಬಗ್ಗೆ ಆರೋಗ್ಯ ಇಲಾಖೆಯಿಂದ ಅಪ್ಡೇಟ್ ಮಾಹಿತಿ ನೀಡಲಾಗಿದೆ. ಈ ಮಗು ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದೆ. ಈ ಮಗುವಿನ ಆರೋಗ್ಯದಲ್ಲಿ ಯಾವುದೇ ಗಂಭೀರ ಅನಾರೋಗ್ಯದ ಲಕ್ಷಣಗಳು ಇರಲಿಲ್ಲ. ಹೀಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚೀನಾದ ಹೆಚ್‌ಎಂಪಿ ವೈರಸ್‌ಗೆ ತುತ್ತಾಗಿರುವ 2ನೇ ಕೇಸ್ 8 ವರ್ಷದ ಮಗುವಿಗೆ ಆರೋಗ್ಯ ಸುಧಾರಿಸಿದೆ. ಈ ಮಗುವನ್ನು ಮಧ್ಯಾಹ್ನ 3 ಗಂಟೆಯ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು. 8 ತಿಂಗಳ ಸ್ನೇಹಲ್ ಎಂಬ ಮಗು ಕಳೆದೊಂದು ವಾರದಿಂದ ಅನಾರೋಗ್ಯ ಸಮಸ್ಯೆ ಇದ್ದು, ಆಸ್ಪತ್ರೆಗೆ ದಾಖಲಾಗಿತ್ತು. ಆಸ್ಪತ್ರೆಗೆ ಬಂದು ಮಗು ದಾಖಲಾದಾಗ ಜ್ವರ, ಶೀತ, ನೆಗಡಿ ಕಂಡುಬಂದಿದ್ದು, ಹೆಚ್‌ಎಂಪಿ ವೈರಸ್ ಇರುವುದು ಪತ್ತೆಯಾಗಿತ್ತು. ಎರಡು ದಿನಗಳ ಕಾಲ ಮಗುವನ್ನು ನಿಗಾದಲ್ಲಿ ಇರಿಸಲಾಗಿದ್ದು, ನಂತರ ಚೇತರಿಕೆ ಕಾಣಿಸಿಕೊಂಡ ನಂತರ ಮನೆಗೆ ಕಳುಹಿಸಲಾಗುತ್ತದೆ. 

ಇನ್ನು ಈ ಬಗ್ಗೆ ಮಾತನಾಡಿದ ಪೋಷಕರು ಹೆಚ್‌ಎಂಪಿವಿ ವೈರಸ್ ತಗುಲಿದ ಬಗ್ಗೆ ನಮಗೆ ನಂಬಿಕೆಯಿಲ್ಲ. ಕಾರಣ ನಾವು ಮಗುವನ್ನು ಕರೆದುಕೊಂಡು ಎಲ್ಲಿಗೂ ಹೊರಗಡೆ ಹೋಗಿಲ್ಲ. ನಾವು ಇನ್ನೊಂದು ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಸಿ ಖಚಿತಪಡಿಸಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more