ಲಾಕ್‌ಡೌನ್ ನಿಯಮ ಯಾರಾದರೂ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ: ಭಾಸ್ಕರ್‌ ರಾವ್

Jul 15, 2020, 3:36 PM IST

ಬೆಂಗಳೂರು (ಜು. 15): ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಘೋಷಿಸಿರುವ ಲಾಕ್‌ಡೌನ್ ಅನ್ನು ಮಂಗಳವಾರ ರಾತ್ರಿಯಿಂದಲೇ ಕಟ್ಟುನಿಟ್ಟಾಗಿ ಜಾರಿಗೆ ಕಾರ್ಯಾಚರಣೆ ಆರಂಭಿಸಿರುವ ರಾಜಧಾನಿ ಪೊಲೀಸರು ನಗರ ವ್ಯಾಪ್ತಿಯಲ್ಲಿ ದಿನಸಿ ಹಾಗೂ ತರಕಾರಿ ಸೇರಿ ಅಗತ್ಯ ವಸ್ತುಗಳ ಮಾರಾಟಕ್ಕೆ ಮಧ್ಯಾಹ್ನ 12 ರವರೆಗೆ ಮಾತ್ರ ಅವಕಾಶ ನೀಡಲಾಗಿದೆ. 

ನಾಗರೀಕ ಸಂಚಾರಕ್ಕೆ ಯಾವುದೇ ವಿನಾಯಿತಿ ನೀಡದೇ ಸರ್ಕಾರ ನಿಯಮ ಪಾಲಿಸುವಂತೆ ಕಟ್ಟಪ್ಪಣೆ ಮಾಡಿದ್ದಾರೆ. ಜೊತೆಗೆ ಬೆಳಗಿನ ಜಾವ ಅಗತ್ಯ ವಸ್ತುಗಳ ಮಾರಾಟಕ್ಕೆ ಯಾವುದೇ ತೊಂದರೆಯಾಗದಂತೆ ಸಾರ್ವಜನಿಕರೊಂದಿಗೆ ವರ್ತಿಸುವಂತೆ ಪೊಲೀಸರಿಗೆ ಸೂಚನೆಯನ್ನೂ ನೀಡಿದ್ದಾರೆ. 

ರಸ್ತೆಗಿಳಿಯಬೇಡಿ, 12 ಗಂಟೆ ನಂತರ ಹೊರ ಬಂದ್ರೆ ಲಾಠಿ ಏಟು ಪಕ್ಕಾ; ಗೃಹ ಸಚಿವ