Nov 23, 2022, 3:22 PM IST
ಬೆಂಗಳೂರು (ನ. 23): ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಅವರು ರಚಿಸಿರುವ ಟಿಪ್ಪು ನಿಜ ಕನಸುಗಳು ಪುಸ್ತಕ ಮಾರಾಟಕ್ಕೆ ತಡೆ ನಿಡಿ ಬೆಂಗಳೂರ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. ಆನ್‌ಲೈನ್‌ನಲ್ಲಿ ಸೇರಿದಂತೆ ಎಲ್ಲಿಯೂ ಮಾರಾಟ ಮತ್ತು ಹಂಚಿಕೆ ಮಾಡದಂತೆ ಕೋರ್ಟ್ ಆದೇಶ ನೀಡಿದೆ. ಪುಸ್ತಕ ಮುದ್ರಿಸಿರುವ ರಾಷ್ಟ್ರೋತ್ಥಾನ ಮುದ್ರಣಾಲಯವು ಪುಸ್ತಕ ಹಂಚಿಕೆ ಮತ್ತು ಮಾರಾಟ ಮಾಡದಂತೆ ಆದೇಶ ನೀಡಿದೆ. 15ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ಜೆ ಆರ್ ಮೆಂಡೋನ್ಸಾ ಅವರು ಈ ಆದೇಶ ನೀಡಿದ್ದಾರೆ.
‘ಟಿಪ್ಪು ನಿಜಕನಸು ನಾಟಕ’ ವಿರುದ್ಧ ಕಾನೂನು ಹೋರಾಟ; ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ಟಿಪ್ಪು ವಿವಿ: ಇಬ್ರಾಹಿಂ