ಬೆಳಗಾವಿ ಅಧಿವೇಶನ ಮುಗಿಯುತ್ತಿದ್ದಂತೆ ಬೆಂಗಳೂರಿಗೆ ಕಾದಿದೆಯೇ ಮತ್ತೊಂದು ಶಾಕ್?

Dec 16, 2024, 5:12 PM IST

ಬೆಂಗಳೂರು: ಬೆಳಗಾವಿ ಅಧಿವೇಶನ ಮುಗಿಯುತ್ತಿದ್ದಂತೆ ಬೆಂಗಳೂರಿಗೆ ಕಾದಿದ್ಯಾ ಶಾಕ್ ಎನ್ನುವ ಆತಂಕ ಕಾಡಲಾರಂಭಿಸಿದೆ. ಈಗಾಗಲೇ ಹಾಲಿನ ಬೆಲೆ ಹೆಚ್ಚಳದಿಂದ ಕಂಗಾಲಾಗಿರುವ ಮಂದಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡುವ ತಯಾರಿಯಲ್ಲಿದೆ. 

ಹೌದು, ಕಾವೇರಿ ನೀರು ದರ ಹೆಚ್ಚಿಸಲು ಜಲಮಂಡಳಿ ಸಿದ್ಧತೆ ನಡೆಸಿದೆ. ವಿಧಾನ ಮಂಡಲ ಕಲಾಪ ಮುಗಿದ ಬಳಿಕ ರಾಜ್ಯ ಸರ್ಕಾರ ಕಾವೇರಿ ನೀರು ದರ ಪರಿಷ್ಕರಣೆ ಮಾಡಲು ಮುಂದಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.