ಭಾರತ್ ಬಂದ್ : ಸಿಎಂ ಮನೆಗೆ ಮುತ್ತಿಗೆ, ಪ್ರತಿಭಟನೆಯ ಕಾವು ಹೆಚ್ಚಿಸಲು ರೈತ ಸಂಘಟನೆಗಳ ನಿರ್ಧಾರ

Dec 8, 2020, 10:19 AM IST

ಬೆಂಗಳೂರು (ಡಿ. 08): ಕೇಂದ್ರ ಸರ್ಕಾರ ಅಂಗೀಕರಿಸುವ 3 ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ದೆಹಲಿಯಲ್ಲಿ ರೈತರ ಪ್ರತಿಭಟನೆ 13 ನೇ ದಿನಕ್ಕೆ ಕಾಲಿಟ್ಟಿದೆ. ಆದರೂ ಸರ್ಕಾರ ಬಗ್ಗುತ್ತಿಲ್ಲ. ಅತ್ತ ಸರ್ಕಾರವೂ ಬಗ್ಗುತ್ತಿಲ್ಲ. ಇತ್ತ ರೈತರು ಹಠ ಬಿಡುತ್ತಿಲ್ಲ. ಇಂದು ರೈತರು ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ. 

ಭಾರತ್ ಬಂದ್ : ಕೃಷಿ ಕಾನೂನು ವಿರುದ್ಧ ದೇಶಾದ್ಯಂತ ಹೆಚ್ಚಿದ ರೈತರ ಕಿಚ್ಚು

ಭಾರತ್ ಬಂದ್‌ಗೆ ರಾಜ್ಯದಲ್ಲೂ ರೈತ ಸಂಘಟನೆಗಳು ಬೆಂಬಲ ನೀಡಿವೆ. ರಾಜ್ಯದಲ್ಲಿ ಭಾರತ್ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ರೈತ ಮುಖಂಡರು ಸಭೆ ಸೇರಿದ್ದಾರೆ. ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ಚರ್ಚಿಸಿದ್ದಾರೆ.  ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನಗರದ ವಿವಿಧೆಡೆ ಬಂದ್ ಮಾಡಲಾಗಿದೆ. ಸಿಎಂ ಮನೆಗೂ ಮುತ್ತಿಗೆ ಹಾಕುವ ಬಗ್ಗೆ ಚಿಂತನೆ ನಡೆಸಲಾಗಿದೆ.