ಭಾರತ್ ಬಂದ್‌ಗೆ ದಕ್ಷಿಣ ಕನ್ನಡ ಸ್ಪಂದಿಸಿದ್ದು ಹೀಗೆ

Dec 8, 2020, 12:23 PM IST

ಬೆಂಗಳೂರು (ಡಿ. 08): ಭಾರತ್ ಬಂದ್‌ಗೆ ರಾಜ್ಯದಲ್ಲಿಯೂ ಬೆಂಬಲ ವ್ಯಕ್ತವಾಗಿದೆ. ಜಿಲ್ಲಾ ಕೇಂದ್ರಗಳಲ್ಲಿ ರೈತರು ಬೇರೆ ಬೇರೆ ರೀತಿ ಪ್ರತಿಭಟನೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಲ್ಲಿನ ಸಾರಿಗೆ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ಪ್ರಯಾಣಿಕರೂ ಕೂಡಾ ಆತಂಕವಿಲ್ಲದೇ ಬಸ್‌ ನಿಲ್ದಾಣಕ್ಕೆ ಆಗಮಿಸುತ್ತಾರೆ. ಖಾಸಗಿ ಬಸ್ ಸಂಚಾರ ಕೂಡಾ ಸಹಜ ಸ್ಥಿತಿಯಲ್ಲಿದೆ. ದಕ್ಷಿಣ ಕನ್ನಡ ಮುಸ್ಲಿಂ ಒಕ್ಕೂಟ, ರೈತ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. 

ಅರಬೆತ್ತಲೆಯಾಗಿ ಉರುಳು ಸೇವೆ ಮಾಡಿ ಕೇಂದ್ರದ ವಿರುದ್ಧ ರೈತರ ಆಕ್ರೋಶ