Weekend Curfew Lifts ಎರಡು ವಾರ ನಷ್ಟ ಅನುಭವಿಸಿದ್ದ ಉದ್ದಿಮೆಗಳಿಗೆ ಬಿಗ್ ರಿಲೀಫ್

Jan 21, 2022, 6:16 PM IST

ಬೆಂಗಳೂರು, (ಜ.21): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಕೋವಿಡ್‌ ಸ್ಥಿತಿ-ಗತಿ ಕುರಿತು ಇಂದು(ಶುಕ್ರವಾರ) ಪರಿಶೀಲನಾ ಸಭೆ ನಡೆದಿದ್ದು, ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ಹಿಂಪಡೆಯಲು ತೀರ್ಮಾನಿಸಲಾಗಿದೆ.

Covid-19: ವೀಕೆಂಡ್ ಕರ್ಫ್ಯೂ ರದ್ದು ಮಾಡಿದ ರಾಜ್ಯ ಸರ್ಕಾರ, ಬೆಂಗಳೂರಿನಲ್ಲಿ ಶಾಲೆಗಳು ಸದ್ಯಕ್ಕೆ ಆರಂಭವಿಲ್ಲ!

ಕಳೆದ ಎರಡು ವಾರ ಕರ್ನಾಟಕದಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ನೈಟ್ ಕರ್ಫ್ಯೂವನ್ನು ಮುಂದುವರೆಸಲಾಗಿದೆ. ಇದರಿಂದ ಚಿತ್ರಮಂದಿರ, ಮಾಲ್, ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ  ಬಿಗ್ ರಿಲೀಫ್ ಸಿಕ್ಕಂತಾಗಿದೆ.