ಬಿಟ್‌ಕಾಯಿನ್ ಕೇಸ್‌ನಲ್ಲಿ ಕಾಂಗ್ರೆಸ್ಸಿಗರಿ ಸುಳ್ಳಿನ ಸರದಾರರಾಗಿದ್ಧಾರೆ. ಬುಟ್ಟಿಯಲ್ಲಿ ಹಾವಿದೆ ತೋರಿಸುತ್ತೇವೆ ಎನ್ನುತ್ತಾರೆಯೇ ಹೊರತು ತೋರಿಸುತ್ತಿಲ್ಲ' ಎಂದು ಸಚಿವರಾದ ವಿ ಸೋಮಣ್ಣ ಹಾಗೂ ಆರ್ ಅಶೋಕ್ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ಧಾರೆ.
ಬೆಂಗಳೂರು (ನ. 16): ಬಿಟ್‌ಕಾಯಿನ್ ಕೇಸ್‌ನಲ್ಲಿ (Bitcoin Scam) ಕಾಂಗ್ರೆಸ್ಸಿಗರು ಸುಳ್ಳಿನ ಸರದಾರರಾಗಿದ್ಧಾರೆ. ಬುಟ್ಟಿಯಲ್ಲಿ ಹಾವಿದೆ ತೋರಿಸುತ್ತೇವೆ ಎನ್ನುತ್ತಾರೆಯೇ ಹೊರತು ತೋರಿಸುತ್ತಿಲ್ಲ' ಎಂದು ಸಚಿವರಾದ ವಿ ಸೋಮಣ್ಣ ಹಾಗೂ ಆರ್ ಅಶೋಕ್ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ಧಾರೆ.
ಇನ್ನು ಮೂರು ವರ್ಷದ ಹಿಂದೆ ನಗರದ ಯುಬಿ ಸಿಟಿಯಲ್ಲಿ ನಡೆದಿದ್ದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗಲಾಟೆ ಪ್ರಕರಣದ ಹಿಂದೆ ಬಿಟ್ ಕಾಯಿನ್ ದಂಧೆ ಇದೆ ಎಂಬ ಶಂಕೆಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗಲೇ ವ್ಯಕ್ತಪಡಿಸಿದ್ದರೂ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಲಕ್ಷಿಸಿದ್ದು ಯಾಕೆ ಎಂದು ಬಿಜೆಪಿ ಖಾರವಾಗಿ ಪ್ರಶ್ನಿಸಿದೆ.
ಇನ್ನೊಂದೆಡೆ ಬಿಟ್ ಕಾಯಿನ್ ಹಗರಣದ ಸೂತ್ರಧಾರ ಎನ್ನಲಾದ ಶ್ರೀಕಿ ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆ ಇದೆ. ಹೀಗಾಗಿ ಅವರಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.