Murugha Shree Case: ಇಷ್ಟು ಕೀಳುಮಟ್ಟಕ್ಕೆ ಇಳೀತಾರೆ ಎಂದು ನಿರೀಕ್ಷಿಸಿರಲಿಲ್ಲ: ಮೌನ ಮುರಿದ ಬಿಎಸ್‌ವೈ

Nov 8, 2022, 2:28 PM IST

ಮುರುಘಾ ಶರಣರಿಂದ ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಮೊದಲ ಬಾರಿಗೆ ಶ್ರೀಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮೌನ ಮುರಿದಿದ್ದು, ಸ್ವಾಮೀಜಿಗಳ ವಿರುದ್ಧ ಗುಡುಗಿದ್ದಾರೆ. ಮುರುಘಾ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು. ಶ್ರೀಗಳು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಅವರು ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆಂದು ನಿರೀಕ್ಷಿಸಿರಲಿಲ್ಲ. ಶ್ರೀಗಳ ನಡವಳಿಕೆಯನ್ನು ಎಲ್ಲರೂ ಖಂಡಿಸಬೇಕು ಎಂದು ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಉಡುಪಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ.