Jan 26, 2022, 4:24 PM IST
ಬೆಂಗಳೂರು (ಜ. 26): ರಾಜ್ಯದ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ ಇನ್ನೂ ಒಂದೂಕಾಲು ವರ್ಷ ಬಾಕಿ ಇರುವಾಗಲೇ ಪಕ್ಷಾಂತರದ ಬಗ್ಗೆ ಏಕಾಏಕಿ ಬಿರುಸಿನ ಚರ್ಚೆ ಆರಂಭವಾಗಿದೆ. 'ವಿಜಯಪುರದ ಬಿಜೆಪಿ ಶಾಸಕ ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್ & ಜೆಡಿಎಸ್‌ನಿಂದ ವಲಸೆ ಬಂದವರ ಪೈಕಿ ಕೆಲವರು ವಾಪಸ್ ಹೋಗಲಿದ್ದಾರೆ ಎಂದು ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ನೀಡಿ ಹೇಳಿಕೆಗೆ ಇದೀಗ ಈ ಚರ್ಚೆಗೆ ಕಾರಣವಾಗಿದೆ.
News Hour:ಕೈ ಪಡೆ ಜತೆ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರು ಯಾರು? ಹೊಸ ರಾಜಕಾರಣ
ಜೆಡಿಎಸ್ ಮತ್ತು ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿರುವುದು ನಿಜ. ಆದರೆ ಅವರ ಹೆಸರನ್ನು ಮಾತ್ರ ಈಗ ಹೇಳುವುದಿಲ್ಲ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಕುತೂಹಲ ಹೆಚ್ಚಿಸಿದ್ದಾರೆ.
ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ, ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಪ್ರತಿಪಕ್ಷ ಕಾಂಗ್ರೆಸ್‌ನ ಇನ್ನೂ 16 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿ ಹೈಕಮಾಂಡ್ ಸಮ್ಮತಿ ಸೂಚಿಸಿದರೆ ಅವರನ್ನು ಬಿಜೆಪಿಗೆ ಕರೆತರುತ್ತೇನೆ ಎಂದು ಸ್ಫೋಟಕ ಹೇಳಿಕೆ ನೀಡುವ ಮೂಲಕ ಚರ್ಚೆಯ ಸ್ವರೂಪ ತೀವ್ರಗೊಳಿಸುವ ಪ್ರಯತ್ನ ಮಾಡಿದ್ದಾರೆ.