Feb 20, 2024, 11:41 PM IST
ಕಾಡಾನೆ ದಾಳಿಗೆ ಕೇರಳ ವಯನಾಡಿನ ವ್ಯಕ್ತಿ ಮೃತಪಟ್ಟ ಬಳಿಕ ನೀಡಿದ ಪರಿಹಾರ ಹಲವು ವಿವಾದಕ್ಕೆ ಕಾರಣವಾಗಿದೆ. ಕೇರಳ ಸರ್ಕಾರ 10 ಲಕ್ಷ ರೂಪಾಯಿ ಹಾಗೂ ಕುಟುಂಬದ ಸದಸ್ಯರಿಗೆ ಒಂದು ಸರ್ಕಾರಿ ಉದ್ಯೋಗ ಘೋಷಿಸಿದೆ. ಆದರೆ ವಯನಾಡು ಸಂಸದ ರಾಹುಲ್ ಗಾಂಧಿ ಕರ್ನಾಟಕ ಸರ್ಕಾರಕ್ಕೆ ನೀಡಿದ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಕೇರಳ ವ್ಯಕ್ತಿಗೆ 15 ಲಕ್ಷ ರೂಪಾಯಿ ಪರಿಹಾರ ನೀಡಿದೆ. ಎರಡೇ ದಿನದಲ್ಲಿ ಪರಿಹಾರ ಕೇರಳದ ಮೃತ ವ್ಯಕ್ತಿ ಕುಟುಂಬಕ್ಕೆ ತಲುಪಿದೆ. ಕರ್ನಾಟಕದ ಆನೆಯಿಂದ ಕೇರಳ ವ್ಯಕ್ತಿ ಬಲಿಯಾಗಿದ್ದಾರೆ ಎಂದು ಪರೋಕ್ಷವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ನಡೆಯನ್ನು ಸಮರ್ಥಿಸಿಕೊಂಡು ಹಳ್ಳಕ್ಕೆ ಬಿದ್ದಿದೆ. ಬಿಜೆಪಿ ಈ ಪರಿಹಾರ ನಡೆಯನ್ನು ತೀವ್ರವಾಗಿ ಖಂಡಿಸಿದೆ. ಇತ್ತ ಸಾಮಾಜಿಕ ಮಾಧ್ಯಮಗಳಲ್ಲಿ ಕರ್ನಾಟಕ ಸರ್ಕಾರದ ನಡೆಯನ್ನು ಹಲವರು ಟೀಕಿಸಿದ್ದಾರೆ.