MLC & ರಾಜ್ಯಸಭೆ ಚುನಾವಣೆ: BJP ಪಾಳಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

Jun 3, 2020, 4:18 PM IST

ಬೆಂಗಳೂರು(ಜೂ.03): ಭಾರತೀಯ ಜನತಾ ಪಕ್ಷದ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕಸರತ್ತು ಶುರುವಾಗಿದೆ.

ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಜೂನ್ 06ನೇ ತಾರೀಖಿನಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಇನ್ನೊಂದೆಡೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಶಾಸಕರ ಸಭೆ ನಡೆಯಲಿದ್ದು, ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

ರಾಜ್ಯಸಭೆಯ 4 ಸ್ಥಾನಕ್ಕೆ ಬಿಜೆಪಿಯಲ್ಲಿ ಬಿಗ್ ಫೈಟ್ ಏರ್ಪಡುವ ಸಾಧ್ಯತೆಯಿದೆ. ರಮೇಶ್ ಕತ್ತಿ, ಪ್ರಭಾಕರ್ ಕೋರೆ ರಾಜ್ಯಸಭೆಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಶಾಸಕರ ಸಂಖ್ಯೆ ಆಧಾರದಲ್ಲಿ ಬಿಜೆಪಿ ಇಬ್ಬರನ್ನು ಗೆಲ್ಲಿಸುವ ಸಾಮರ್ಥ್ಯ ಹೊಂದಿದೆ.

ಪಾದರಾಯನಪುರ ಪುಂಡರಿಗೆ ರೆಡ್ ಕಾರ್ಪೆಟ್ ಹಾಸಿದ ಜಮೀರ್‌ಗೆ ಉಗಿದ ರೇಣುಕಾಚಾರ್ಯ

ಇವೆಲ್ಲದರ ಜತೆಗೆ ತೇಜಸ್ವಿನಿ ಅನಂತ್‌ ಕುಮಾರ್ ಅವರನ್ನು ರಾಜ್ಯಸಭೆಗೆ ಕಳಿಸಬೇಕು ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಇನ್ನು ಪರಿಷತ್ ಚುನಾವಣೆಗೆ ಡಿ.ಎಚ್. ಶಂಕರ್‌ಮೂರ್ತಿ, ಉದ್ಯಮಿ ಪ್ರಕಾಶ್ ಶೆಟ್ಟಿ ಹೆಸರುಗಳು ಪ್ರಮುಖವಾಗಿ ಕೇಳಿ ಬರುತ್ತಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.