ಕಾಶಿಯ ರೀತಿ ಹರಿಹರದ ಯೋಗ ಮಂಟಪದ ಅಭಿವೃದ್ಧಿಗೆ ಆದ್ಯತೆ: ಸಿಎಂ ಭರವಸೆ

Feb 20, 2022, 5:03 PM IST

ದಾವಣಗೆರೆ, (ಫೆ.20)  ಹರಿಹರದ ತುಂಗಭದ್ರಾ ನದಿಯ ತಟದಲ್ಲಿ “ಉತ್ತರದಲ್ಲಿ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣದಲ್ಲಿ ತುಂಗಾ ಆರತಿ” ಪ್ರಯುಕ್ತ 108 ಯೋಗ ಮಂಟಪಗಳ ನಿರ್ಮಾಣ ಕಾರ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಶಿಲಾನ್ಯಾಸ ನೆರವೇರಿಸಿದರು.

Davanagere: ಹರಿಹರ ತುಂಗಭದ್ರಾ ತಟದಲ್ಲಿ ತುಂಗಾರತಿ ಕಾರ್ಯಕ್ರಮ

ವೇದಿಕೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮ ಎಲ್ಲ ನಾಗರಿಕತೆಗಳು ನದಿತಟದಲ್ಲಿಯೇ ಬೆಳೆದಿವೆ. ನಾಗರಿಕತೆ ಮತ್ತು ಸಂಸ್ಕೃತಿ ಎರಡು ಒಟ್ಟಿಗೆ ಬೆಳೆಯಬೇಕು. ನಮ್ಮ ಬದುಕಿನ ಮೂಲ ಜಲ. ಆದ್ದರಿಂದ ಜಲ ರಕ್ಷಣೆ ಹಾಗೂ ಸ್ವಚ್ಛತೆ ನಮ್ಮ ಆದ್ಯತೆಯಾಗಬೇಕು ಎಂದರು.

ತುಂಗಭದ್ರಾ ನದಿಯ ತಟದಲ್ಲಿ ಸುಮಾರು 30 ಕೋಟಿ ರೂ ವೆಚ್ವದಲ್ಲಿ ತುಂಗಾರತಿ ಯೋಗಮಂಟಪದ ಶಂಕುಸ್ಥಾಪನೆ ನೆರವೇರಿಸಿ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇದೊಂದು ಅಪರೂಪವಾದ ಕಾರ್ಯಕ್ರಮ. ಕಟ್ಟಡ ಉದ್ಘಾಟನೆ, ರಸ್ತೆ, ಸೇತುವೆ ಉದ್ಘಾಟನೆ ಮಾಡುತ್ತೇವೆ. ನಮ್ಮ ಬದುಕಿನ ಮೂಲವಾದ ಜಲಮೂಲದ ರಕ್ಷಣೆ, ಸ್ವಚ್ಛತೆ ಇಂದು ನಡೆದಿದೆ. ನಮ್ಮ ಎಲ್ಲಾ ನಾಗರಿಕತೆಗಳು ನದಿತಟದಲ್ಲಿಯೇ ಬೆಳೆದಿದೆ. ನದಿತಟದಲ್ಲಿ ಸಂಸ್ಕೃತಿ ಮತ್ತು ನಾಗರಿಕತೆ ಬೆಳೆಸಬೇಕು ಎಂದು ತುಂಗಾರತಿ ಕಾರ್ಯಕ್ರಮವನ್ನು ವಚನಾನಂದ ಸ್ವಾಮೀಜಿ ಹಮ್ಮಿಕೊಂಡಿದ್ದಾರೆ. ಕಾಶಿಯ ರೀತಿ ಇಲ್ಲಿಯೂ ಅಭಿವೃದ್ಧಿಗಳು ನಡೆಯಲಿವೆ ಎಂದರು.