ಮಂಗಳೂರಿನ ಮಂಗಳಾದೇವಿ ದೇವಸ್ಥಾನ, ಮೂಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸಲು ಅವಕಾಶ ಇಲ್ಲ ಎಂದು ಈಗಾಗಲೇ ಸೂಚನೆ ನೀಡಲಾಗಿದೆ.
ಮಂಗಳೂರು (ಮಾ. 23): ಮಂಗಳಾದೇವಿ ದೇವಸ್ಥಾನ, ಮೂಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸಲು ಅವಕಾಶ ಇಲ್ಲ ಎಂದು ಈಗಾಗಲೇ ಸೂಚನೆ ನೀಡಲಾಗಿದೆ. ಪ್ರಸ್ತುತ ಮಂಗಳಾದೇವಿ ದೇವಸ್ಥಾನದ ಜಾತ್ರೋತ್ಸವ ನಡೆಯುತ್ತಿದ್ದು, ಮೂಲ್ಕಿ ಬಪ್ಪನಾಡು ದೇವಸ್ಥಾನದ ಜಾತ್ರೋತ್ಸವದಲ್ಲೂ ಮುಸ್ಲಿಮ ವ್ಯಾಪಾರಸ್ಥರಿಗೆ ಅವಕಾಶ ನೀಡಲಾಗುತ್ತಿಲ್ಲ. ಇದು ವಿವಾದಕ್ಕೆ ಕಾರಣವಾಗಿದೆ.
'ಬ್ಯಾನರ್ ಹಾಕಿದವರ ಬಗ್ಗೆ ತನಿಖೆಗೆ ಮಂಗಳೂರು ಕಮಿಷನರ್ ಮುಂದಾಗಿದ್ದಾರೆ. ದೇವಸ್ಥಾನದ ಆಡಳಿತ ಮಂಡಳಿ, ತಹಶೀಲ್ದಾರ್ ಜೊತೆ ಚರ್ಚೆ ನಡೆಸಿದ್ದಾರೆ. ಕಾನೂನು ತಜ್ಞರ ಬಳಿ ಮಾಹಿತಿ ಕೇಳಿದ್ದೇವೆ'ಎಂದು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.