Dec 31, 2020, 1:22 PM IST
ಬೆಂಗಳೂರು(ಡಿ.31) ಇಂದು ಮಧ್ಯಾಹ್ನ 12ಗಂಟೆಯಿಂದ ನಾಳೆ ಬೆಳಗ್ಗೆ 6ರವರೆಗೂ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಇದನ್ನೂ ನೋಡಿ |
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಹೊಸ ವರ್ಷಾಚರಣೆ ವೇಳೆ ಕೊವಿಡ್-19 ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಹೊಸ ವರ್ಷ ಎಲ್ಲರಿಗೂ ಸುಖ, ಶಾಂತಿ, ನೆಮ್ಮದಿ ತರಲಿ ಎಂದರು.