Boycott of Muslim Traders: ಶಿವಮೊಗ್ಗ ಮಾರಿಕಾಂಬಾ ಜಾತ್ರೆಯಲ್ಲೂ ನೋ ಎಂಟ್ರಿ

Mar 23, 2022, 1:42 PM IST

ಬೆಂಗಳೂರು (ಮಾ. 23): ಹಿಜಾಬ್‌ ವಿವಾದದಲ್ಲಿ ಹೈಕೋರ್ಟ್‌ ನೀಡಿದ ತೀರ್ಪಿಗೆ ವಿರುದ್ಧವಾಗಿ ಇತ್ತೀಚೆಗೆ ರಾಜ್ಯದ ವಿವಿಧೆಡೆ ಮುಸ್ಲಿಂ ವ್ಯಾಪಾರಿಗಳು ಅಂಗಡಿ ಮುಂಗಟ್ಟು ಬಂದ್‌ ಮಾಡಿದ್ದರು.  ಈ ಹಿನ್ನೆಲೆಯಲ್ಲಿ ಹಿಂದೂ ದೇವಸ್ಥಾನಗಳ ಜಾತ್ರೋತ್ಸವಗಳಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಹಿಂದೂ ಸಂಘಟನೆಗಳು  ಬಹಿರಂಗವಾಗಿ ಬ್ಯಾನರ್‌ ಅಳವಡಿಸಲಾಗಿದ್ದು ಚರ್ಚೆ, ವಿವಾದಕ್ಕೆ ಕಾರಣವಾಗಿದೆ. 

Boycott of Muslim Traders: ಪುತ್ತೂರು ಮಹಾಲಿಂಗೇಶ್ವರ ಜಾತ್ರೆಗೂ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ

ದೇವಸ್ಥಾನದ ಸುತ್ತಮುತ್ತ ಹಿಂದೂಯೇತರರಿಗೆ ಗುತ್ತಿಗೆ ಕೊಡಬಾರದು ಎಂಬ ನಿಯಮ ಧಾರ್ಮಿಕ ದತ್ತಿ ಕಾಯ್ದೆಯ ಪುಸ್ತಕದ ಪುಟ ಸಂಖ್ಯೆ 91ರ 11ನೇ ಪಾಯಿಂಟ್‌ನಲ್ಲಿ ಇದೆ. ದೇವಸ್ಥಾನದ ಸುತ್ತಮುತ್ತ ಯಾವುದೇ ಜಾಗದಲ್ಲಿ ಅಂಗಡಿ ಕೊಡಬಾರದು ಎಂದಿದೆ ಎಂದು ವಿಹಿಂಪ ಮುಖಂಡ ಶರಣ್‌ ಪಂಪ್‌ವೆಲ್‌ ಹೇಳಿದ್ದಾರೆ. 

ದೇವಸ್ಥಾನದ ಜಾತ್ರೆಗಳಲ್ಲಿ ವ್ಯಾಪಾರ ವಹಿವಾಟು ನಡೆಸಲು ಮುಸ್ಲಿಮರಿಗೆ ಅವಕಾಶ ನಿರಾಕರಿಸುತ್ತಿರುವ ಘಟನೆಗಳು ಹೆಚ್ಚಾಗುತ್ತಿದ್ದು ಶಿವಮೊಗ್ಗ ಜಿಲ್ಲೆಗೂ ವ್ಯಾಪಿಸಿದೆ.  ಶಿವಮೊಗ್ಗ ಮಾರಿಕಾಂಬಾ ಜಾತ್ರೆಯಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ನೋ ಎಂಟ್ರಿ.