Jul 22, 2020, 2:15 PM IST
ಬೆಂಗಳೂರು(ಜು.22): ಸಿಲಿಕಾನ್ ಸಿಟಿ ಬೆಂಗಳೂರು ಇಂದಿನಿಂದ ಅನ್‌ಲಾಕ್ ಆಗಿದೆ. ಆದರೆ ಚಿಕ್ಕಪೇಟೆಗೆ ಮಾತ್ರ ಯಾವುದೇ ವಿನಾಯಿತಿ ಸಿಕ್ಕಿಲ್ಲ. ಕಳೆದ 45 ದಿನಗಳಿಂದ ಚಿಕ್ಕಪೇಟೆ ಸಂಪೂರ್ಣ ಬಂದ್ ಆಗಿದೆ.
ಚಿಕ್ಕಪೇಟೆ ತೆರೆಯುವಂತೆ ವ್ಯಾಪಾರಿಗಳು ಸರ್ಕಾರದ ಮೇಲೆ ಒತ್ತಡವನ್ನು ಹಾಕುತ್ತಿದ್ದಾರೆ. ವ್ಯಾಪಾರ ವಹಿವಾಟಿಗೆ ಅವಕಾಶ ಮಾಡಿಕೊಡಿ ಎಂದು ವರ್ತಕರು ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಈ ಕುರಿತಂತೆ ಸಂಸದ ಪಿ.ಸಿ. ಮೋಹನ್ ಅವರ ಜತೆ ಮಾತುಕತೆಗಳನ್ನು ನಡೆಸಿದ್ದಾರೆ.
ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ ಬಿಎಸ್‌ವೈ
ಚಿಕ್ಕಪೇಟೆ ವ್ಯಾಪ್ತಿಯಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚೆಚ್ಚು ಪತ್ತೆಯಾಗುತ್ತಿರುವುದರಿಂದ ಕಳೆದ ಒಂದೂವರೆ ತಿಂಗಳಿನಿಂದ ಲಾಕ್‌ಡೌನ್ ಆಗಿದೆ. ಹೀಗಾಗಿ ವ್ಯಾಪಾರ ವಹಿವಾಟನ್ನೇ ನಂಬಿ ಜೀವನ ಸಾಗಿಸುತ್ತಿದ್ದ ಚಿಕ್ಕಪೇಟೆ ವ್ಯಾಪಾರಿಗಳಿಗೆ ಲಾಕ್‌ಡೌನ್ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.