ಕೇಂದ್ರ ಸಚಿವ ಜೋಶಿ ಮಗಳ ಆರತಕ್ಷತೆಗೆ ದಿಲ್ಲಿಗೆ ಹೊರಟ ಸಿಎಂ

Sep 7, 2021, 9:51 AM IST

ಬೆಂಗಳೂರು (ಸೆ.07) : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೆಹಲಿಗೆ ತೆರಳುತ್ತಿದ್ದು, ಕೇಂದ್ರ ಸಚಿವ ಜೋಶಿ ಮಗಳ ಆರತಾಕ್ಷತೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಕೇಂದ್ರ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಸಿಎಂ ಬೊಮ್ಮಾಯಿ ಇಂದು ದೆಹಲಿಗೆ : 4 ಸಚಿವ ಸ್ಥಾನ ಭರ್ತಿ ಬಗ್ಗೆ ಚರ್ಚೆ?

 ಬೆಳಗ್ಗೆ 11.30ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದಾರೆ. ಮಧ್ಯಾಹ್ನ 2.30ರ ಸುಮಾರಿಗೆ ದೆಹಲಿಗೆ ತಲುಪುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಇತರೆ ವರಿಷ್ಠರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.