ಕೋವಿಡ್ ಸೋಂಕು (CoronaVirus) ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವಿಧಿಸಲಾಗಿರುವ ವಾರಾಂತ್ಯ ಕರ್ಫ್ಯೂ (Weekend curfew) ಮತ್ತು ರಾತ್ರಿ ಕರ್ಫ್ಯೂ (Night Curfew) ಸಡಿಲಿಕೆ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಉನ್ನತ ಮಟ್ಟದ ಸಭೆಯು ಮಹತ್ವದ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.
ಬೆಂಗಳೂರು (ಜ. 21): ಕೋವಿಡ್ ಸೋಂಕು (CoronaVirus) ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವಿಧಿಸಲಾಗಿರುವ ವಾರಾಂತ್ಯ ಕರ್ಫ್ಯೂ (Weekend curfew) ಮತ್ತು ರಾತ್ರಿ ಕರ್ಫ್ಯೂ (Night Curfew) ಸಡಿಲಿಕೆ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಉನ್ನತ ಮಟ್ಟದ ಸಭೆಯು ಮಹತ್ವದ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.
ವಾರಾಂತ್ಯ ಕರ್ಫ್ಯೂ (Weekend Curfew) ಬಗ್ಗೆ ವಿವಿಧ ಸಂಘ ಸಂಸ್ಥೆಗಳಲ್ಲದೆ ಆಡಳಿತಾರೂಢ ಪಕ್ಷದ ಹಿರಿಯ ನಾಯಕರಿಂದಲೂ ಅಪಸ್ವರ ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಹುತೇಕ ಕೆಲವು ಬಿಗಿ ಕ್ರಮಗಳೊಂದಿಗೆ ಕರ್ಫ್ಯೂ ಸಡಿಲಗೊಳಿಸುವ ಸಾಧ್ಯತೆಯೇ ಹೆಚ್ಚಿದೆ ಎನ್ನಲಾಗಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿಇಂದು ಮಧ್ಯಾಹ್ನ 1 ಗಂಟೆಗೆ ನಡೆಯುವ ಸಭೆಯಲ್ಲಿ ಬೊಮ್ಮಾಯಿ ಸೇರಿದಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕಂದಾಯ ಸಚಿವ ಆರ್.ಅಶೋಕ್, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೇರಿದಂತೆ ಇತರೆ ಸಚಿವರು, ತಜ್ಞರು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ.
'ಹಲವಾರು ಸಂಘ ಸಂಸ್ಥೆಗಳು ವ್ಯಾಪಾರ ವಹಿವಾಟಿನ ಬಗ್ಗೆ ಮಾತನಾಡಿದ್ದಾರೆ. ತಜ್ಞರು ಆರೋಗ್ಯದ ದೃಷ್ಟಿಯಿಂದ ವರದಿ ನೀಡಿದ್ದಾರೆ. ಇವೆಲ್ಲಾ ನೋಡಿಕೊಂಡು ಚರ್ಚೆ ಮಾಡಲಿದ್ದೇವೆ. ಎಲ್ಲಾ ಆಯಾಮಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಸಿಎಂ ಭರವಸೆ ನೀಡಿದ್ದಾರೆ.