ಕೊರೋನಾ ಭೀತಿ: ನಿಟ್ಟುಸಿರು ಬಿಟ್ಟ ಸಿಎಂ BSY ಕಚೇರಿ ಸಿಬ್ಬಂದಿ

Jun 20, 2020, 3:29 PM IST

ಬೆಂಗಳೂರು(ಜೂ.20): ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಕಾನ್ಸ್‌ಟೇಬಲ್‌ ಪತಿಗೆ ಕೊರೋನಾ ಸೋಂಕು ತಗುಲಿದೆ ಎಂದು ಶುಕ್ರವಾರವಷ್ಟೇ ವರದಿಯಾಗಿತ್ತು. ಇದರ ಬೆನ್ನಲ್ಲೇ ಶುಕ್ರವಾರ ಕೃಷ್ಣಾದಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿತ್ತು.

ಸಿಎಂ ಗೃಹಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಪೇದೆ ಪತಿಗೆ ಸೋಂಕು ತಗುಲಿದ್ದರಿಂದ ಆಕೆಯನ್ನು ಕೊರೋನಾ ಟೆಸ್ಟ್‌ಗೆ ಒಳಪಡಿಸಲಾಗಿತ್ತು. ಅದೃಷ್ಟವಶಾತ್ ಲೇಡಿ ಕಾನ್ಸ್‌ಟೇಬಲ್‌ಗೆ ಕೊರೋನಾ ಟೆಸ್ಟ್ ನೆಗೆಟಿವ್ ಬಂದಿದೆ. ಇದೀಗ ಗೃಹ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳೆಲ್ಲ ನಿಟ್ಟುಸಿರು ಬಿಟ್ಟಿದ್ದಾರೆ. 

ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಂಟಿದ ಕೊರೋನಾ ಸೋಂಕು..!

ಶುಕ್ರವಾರ ಗೃಹಕಚೇರಿ ಕೃಷ್ಣಾದಲ್ಲಿ ನಡೆಯಬೇಕಿದ್ದ ಕಾರ್ಯಚಟುವಟಿಕೆಗಳು ಕೊರೋನಾ ಭೀತಿಯಿಂದಾಗಿ ವಿಧಾನಸೌಧಕ್ಕೆ ಶಿಫ್ಟ್ ಆಗಿದ್ದವು. ಈಗ ಕೃಷ್ಣಾ ಕಚೇರಿ ಬಹುದೊಡ್ಡ ಗಂಡಾಂತರದಿಂದ ಪಾರಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.