ಕಲ್ಲಿದ್ದಲು ಬರ, ರಾಯಚೂರು, ಬಳ್ಳಾರಿಯಲ್ಲಿ 2 ಘಟಕ ಸ್ಥಗಿತ, ರಾಜ್ಯದಲ್ಲಿ ಪವರ್ ಕಟ್ ಆರಂಭ

Oct 12, 2021, 9:36 AM IST

ಬೆಂಗಳೂರು (ಅ. 12): ಕಲ್ಲಿದ್ದಲು ಕೊರತೆಯಿಂದ ಉಷ್ಣ ವಿದ್ಯುತ್‌ ಸ್ಥಾವರಗಳಲ್ಲಿ ವಿದ್ಯುತ್‌ ಉತ್ಪಾದನೆ ಶೇ.52 ರಷ್ಟು ಕುಸಿದಿದೆ. ಅಲ್ಲದೆ, ರಾಜ್ಯದ ಒಟ್ಟಾರೆ ವಿದ್ಯುತ್‌ ಉತ್ಪಾದನೆಯೂ ಶೇ. 52 ರಷ್ಟು ಕುಸಿತ ಕಂಡಿದೆ.

ಇದರ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರಮುಖ ನಗರಗಳಲ್ಲಿ ಭಾರಿ ವಿದ್ಯುತ್‌ ಕಡಿತ ಆರಂಭವಾಗಿದೆ. ರಾಜ್ಯಾದ್ಯಂತ ವಿವಿಧ ಎಸ್ಕಾಂಗಳು ವಿದ್ಯುತ್‌ ಕಡಿತದ ಪರ್ವ ಶುರು ಮಾಡಿದ್ದು, ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ರಾಜ್ಯಕ್ಕೆ ಕಗ್ಗತ್ತಲು ಆವರಿಸುವ ಆತಂಕ ಎದುರಾಗಿದೆ.

'ಕಲ್ಲಿದ್ದಲು ಕೊರತೆ ಕೃತಕವೋ ಅಥವಾ ಸ್ವಾಭಾವಿಕವೋ ಎಂಬುದು ಮೊದಲು ಗೊತ್ತಾಗಬೇಕು. ವಿದ್ಯುತ್‌ ಉತ್ಪಾದನಾ ಘಟಕಗಳನ್ನು ಖಾಸಗಿಯವರಿಗೆ ನೀಡುವ ಉದ್ದೇಶದಿಂದ ಕೃತಕ ಅಭಾವ ಸೃಷ್ಟಿಸಬಾರದು' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.