
ಅನುದಾನ ಬಿಡುಗಡೆ ಮಾಡಿ, ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅಸಮಾಧಾನ, ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ, ಬಿಜೆಪಿ ಕಾಲದ 21 ಹಗರಣ ಪಟ್ಟಿ ರಿಲೀಸ್ ಮಾಡಿದ ಸಿದ್ದರಾಮಯ್ಯ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
ಕಾಂಗ್ರೆಸ್ ಸರ್ಕಾರಕ್ಕೆ ಪ್ರತಿ ದಿನ ಒಂದಲ್ಲ ಒಂದು ಸಂಕಷ್ಟ ಸುತ್ತಿಕೊಳ್ಳುತ್ತಿದೆ. ವಾಲ್ಮೀಕಿ ಹಗರಣ, ಮೂಡಾ ಹಗರಣಗಳ ಸುಳಿಯಲ್ಲಿ ಸಿಲುಕಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಇದೀಗ ಮತ್ತೊಂದು ತಲೆನೋವು ಶುರುವಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಲವು ಶಾಸಕರು ಅಸಮಾಧಾನ ಹೊರಹಾಕಿದ್ದಾರೆ. ತಕ್ಷಣವೇ ಅನುದಾನ ಬಿಡುಗಡೆ ಮಾಡುವಂತೆ ಸಚಿವರು ಸೂಚನೆ ನೀಡಲು ಶಾಸಕರು ತಾಕೀಕು ಮಮಾಡಿದ್ದಾರೆ. ಉಚಿತ ಗ್ಯಾರೆಂಟಿಗಿಂತ ಅಭಿವೃದ್ಧಿಯತ್ತ ಗಮನಹರಿಸಬೇಕು ಎಂದು ಸಲಹೆ ನೀಡಿದ್ದಾರೆ.