ಕೊರೋನಾ ಪ್ರಕರಣಗಳನ್ನು ಹೆಚ್ಚಾಗಿ ಸೃಷ್ಟಿಸಿ ಮೇಕೆದಾಟು ಪಾದಯಾತ್ರೆ (Mekedatu) ತಡೆಯಲು ರಾಜ್ಯ ಬಿಜೆಪಿ ಸರ್ಕಾರದವರು ಯತ್ನಿಸುತ್ತಿದ್ದಾರೆ. ಲಾಕ್‌ಡೌನ್ (Lockdown) ಜಾರಿಯಾದರೂ ನಾವು ಪಾದಯಾತ್ರೆ ನಡೆಸುತ್ತೇವೆ. ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.
ಬೆಂಗಳೂರು (ಜ. 04): ಕೊರೋನಾ ಪ್ರಕರಣಗಳನ್ನು ಹೆಚ್ಚಾಗಿ ಸೃಷ್ಟಿಸಿ ಮೇಕೆದಾಟು ಪಾದಯಾತ್ರೆ (Mekedatu) ತಡೆಯಲು ರಾಜ್ಯ ಬಿಜೆಪಿ ಸರ್ಕಾರದವರು ಯತ್ನಿಸುತ್ತಿದ್ದಾರೆ. ಲಾಕ್‌ಡೌನ್ (Lockdown) ಜಾರಿಯಾದರೂ ನಾವು ಪಾದಯಾತ್ರೆ ನಡೆಸುತ್ತೇವೆ. ಲಾಕ್‌ಡೌನ್ ಜಾರಿಗೂ ನಾವು ಹೆದರುವುದಿಲ್ಲ. ಮೇಕೆದಾಟು ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.
ನಮ್ಮ ಪಾದಯಾತ್ರೆಗೆ ವ್ಯಾಪಕ ಟೀಕೆ ಕೇಳಿ ಬರುತ್ತಿದೆ. ಆದರೆ, ನಾವು ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಈ ಹೋರಾಟದಲ್ಲಿ ಭಾಗಿಯಾಗುವಂತೆ ಎಲ್ಲಾ ಪಕ್ಷದ ಮುಖಂಡರು, ನಾಯಕರು, ಮಠಾಧಿಪತಿಗಳು, ಹಾಲಿ, ಮಾಜಿ ಶಾಸಕರಿಗೆ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದರು.
ರಾಜ್ಯದಲ್ಲೀಗ ಕೋವಿಡ್ (Covid 19) ಹೆಚ್ಚಳ ಆಗುತ್ತಿರುವ ಹೊತ್ತಲ್ಲಿ ಕಾಂಗ್ರೆಸ್ (Congress) ಪಾದಯಾತ್ರೆ ಮಾಡುತ್ತಿರುವುದು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಕೋವಿಡ್ ಮೊದಲ ಅಲೆ, ಎರಡನೇ ಅಲೆ ಬಂದಾಗಲೂ ಕಾಂಗ್ರೆಸ್‌ನವರು ಏನನ್ನೂ ಮಾಡಿಲ್ಲ, ಟೀಕೆಯಷ್ಟೇ ಮಾಡಿದ್ದು. ಈಗ ಪಾದಯಾತ್ರೆ ಮಾಡಿ ಕೊರೋನಾವನ್ನು ವಿಸ್ತಾರ ಮಾಡಲು ನೋಡ್ತಿದಾರೆ. ಕಾಂಗ್ರೆಸ್‌ನವರ ಮೆರವಣಿಗೆಯಿಂದ ಖಂಡಿತಾ ಕೊರೋನಾ ಹೆಚ್ಚಳವಾಗುತ್ತೆ, ಇದಕ್ಕೆ ಕಾಂಗ್ರೆಸ್ ಹೊಣೆ ಹೊರಬೇಕಾಗುತ್ತದೆ ಎಂದು ನಳೀನ್ ಕುಮಾರ್ (Nalin Kumar kateel) ಎಚ್ಚರಿಸಿದ್ದಾರೆ.