ಕಾಂಗ್ರೆಸ್ ಕರ್ನಾಟಕದಲ್ಲಿ ಕೆಲವು ನಿರ್ದಿಷ್ಟ ಸಮುದಾಯಗಳಿಗೆ ಹೇಗೆ ಲಂಚ ನೀಡಿ, ತುಷ್ಟೀಕರಣದ ರಾಜಕಾರಣವನ್ನು ಮಾಡುತ್ತದೆ ಎಂಬುದಕ್ಕೆ ಮತ್ತೊಂದು ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಓಲೈಕೆ ರಾಜಕಾರಣ ಮಾಡ್ತಿದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿಯವರ ಕಾಂಗ್ರೆಸ್ ಕರ್ನಾಟಕದಲ್ಲಿ ಕೆಲವು ನಿರ್ದಿಷ್ಟ ಸಮುದಾಯಗಳಿಗೆ ಹೇಗೆ ಲಂಚ ನೀಡಿ, ತುಷ್ಟೀಕರಣದ ರಾಜಕಾರಣವನ್ನು ಮಾಡುತ್ತದೆ ಎಂಬುದಕ್ಕೆ ಮತ್ತೊಂದು ಸ್ಪಷ್ಟ ಉದಾಹರಣೆ ಇಲ್ಲಿದೆ. ₹6 ಲಕ್ಷದ ವಾಹನವನ್ನು ಶೇ.50ರಷ್ಟು ಸಬ್ಸಿಡಿ ಬಳಸಿಕೊಂಡು ಖರೀದಿಸಿ, ಮರು ದಿನವೇ ₹5 ಲಕ್ಷಕ್ಕೆ ಆ ವಾಹನವನ್ನು ಮಾರಿ, ಕೂತಲ್ಲೇ ಬರೋಬ್ಬರಿ ₹2 ಲಕ್ಷ ನಿವ್ವಳ ಲಾಭ. ಹಿಂದೂಯೇತರ ಸಮುದಾಯಗಳಿಗೆ ಮಾತ್ರ ಈ ಸೌಲಭ್ಯವಿದ್ದು, ಬಡ ಹಿಂದೂಗಳಿಗೆ ಈ ಸೌಲಭ್ಯ ಇಲ್ಲ ಎಂದು ಟ್ವೀಟ್ ಮೂಲಕ ಆರೋಪಿಸಿದ್ದಾರೆ.