ಸಿದ್ದರಾಮಯ್ಯ ಹೇಳಿಕೆ ವಿಚಾರ ಇದ್ದು ಸದ್ದು ಮಾಡುತ್ತಿದ್ದರೂ, ಕಾಂಗ್ರೆಸ್ ಸ್ಪಷ್ಟನೆ ನೀಡಿಲ್ಲ. ಮೌನಕ್ಕೆ ಶರಣಾಗಿದೆ. ಹಾಗಾದರೆ ಅಂತರ ಕಾಯ್ದುಕೊಳ್ಳುತ್ತಿದೆಯಾ.? ಎಂಬ ಪ್ರಶ್ನೆ ಎದ್ದಿದೆ.
ಬೆಂಗಳೂರು (ಮಾ. 26): ಹಿಜಾಬ್ ಅನ್ನು ಸಮರ್ಥಿಸಿಕೊಳ್ಳುವ ಬರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡಿದೆ. ‘ಮುಸ್ಲಿಂ ಹೆಣ್ಣು ಮಕ್ಕಳು ತಲೆ ಮೇಲೆ ದುಪ್ಪಟ ಹಾಕಿದರೆ ತಪ್ಪೇನಿದೆ? ಹಿಂದೂ ಹೆಣ್ಣುಮಕ್ಕಳು ಮತ್ತು ಸ್ವಾಮೀಜಿಗಳು ತಲೆ ಮೇಲೆ ಬಟ್ಟೆಹಾಕಿಕೊಂಡರೆ ಅದನ್ನೂ ಪ್ರಶ್ನಿಸುತ್ತೀರಾ’ ಎಂದು ಸಿದ್ದರಾಮಯ್ಯ ಅವರು ಹೇಳಿದ್ದು ಇದಕ್ಕೆ ಬಿಜೆಪಿ ನಾಯಕರು ಮತ್ತು ರಾಜ್ಯದ ಹಲವು ಸ್ವಾಮೀಜಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂಚರಾಜ್ಯ ಚುನಾವಣಾ ಸೋಲಿನಿಂದ ಸಿದ್ದರಾಮಯ್ಯ ಹತಾಶರಾಗಿದ್ದಾರೆ. ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸಿದ್ದರಾಮಯ್ಯ ಹೇಳಿಕೆ ವಿಚಾರ ಇದ್ದು ಸದ್ದು ಮಾಡುತ್ತಿದ್ದರೂ, ಕಾಂಗ್ರೆಸ್ ಸ್ಪಷ್ಟನೆ ನೀಡಿಲ್ಲ. ಮೌನಕ್ಕೆ ಶರಣಾಗಿದೆ. ಹಾಗಾದರೆ ಅಂತರ ಕಾಯ್ದುಕೊಳ್ಳುತ್ತಿದೆಯಾ.? ಎಂಬ ಪ್ರಶ್ನೆ ಎದ್ದಿದೆ.