Jan 21, 2022, 3:10 PM IST
ಬೆಂಗಳೂರು (ಜ. 21): ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ (Mohammad Nalapad) ಹಾಗೂ ಬೆಂಬಲಿಗರು, ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬಳ್ಳಾರಿ (Ballary) ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳಿಗೌಡ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಯುವ ಕಾಂಗ್ರೆಸ್‌ನ ವಾಟ್ಸ್‌ಆ್ಯಪ್ ಗ್ರೂಪ್ (Whatsapp Group) ಒಂದರಲ್ಲಿ ಸಂದೇಶ ಹಾಕಿದ್ದ ಸಿದ್ದು ಹಳ್ಳಿಗೌಡ, ಬಳಿಕ ‘ನನ್ನ ಮೇಲೆ ಯಾವುದೇ ಹಲ್ಲೆ ಆಗಿಲ್ಲ. ಈ ಬಗ್ಗೆ ಬಿಜೆಪಿ ಷಡ್ಯಂತ್ರ ಮಾಡಿ ಸುಳ್ಳು ಸುದ್ದಿ ಹರಡುತ್ತಿದೆ’ ಎಂದು ಸ್ಪಷ್ಟನೆ ನೀಡಿದ್ದಾರೆ.
News Hour: ಕರ್ನಾಟಕದಲ್ಲಿ ಕೊರೊನಾ ಹೆಚ್ಚಳ, ಬದ್ಧ ವೈರಿಗಳ ಗುಪ್ತ್- ಗುಪ್ತ್ ಮಾತುಕತೆ
ಜ.30ರ ಬಳಿಕ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಸಂಬಂಧ ಸಿದ್ಧತೆಗಾಗಿ ಸಭೆ ನಡೆಸಿದ್ದ ಬಳಿಕ ಯಲಹಂಕ ಬಳಿಯ ಹೋಟೆಲ್ ಒಂದರಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಸಿದ್ದು ಹಳ್ಳಿಗೌಡ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ತಮ್ಮ ವಿರುದ್ಧ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ನಲಪಾಡ್ ಹಾಗೂ ಬೆಂಬಲಿಗರು ನನ್ನ ಮೇಲೆ ಹಲ್ಲೆ ನಡೆಸಿದರು ಎಂಬ ಆರೋಪವುಳ್ಳ ಸಂದೇಶ ಹರಿದಾಡುತ್ತಿದೆ.