Mekedatu Padayatre: ಅರ್ಧಕ್ಕೆ ಮೊಟಕುಗೊಂಡ ಪಾದಯಾತ್ರೆ, ಗೆದ್ದಿದ್ಯಾರು.? ಸೋತಿದ್ಯಾರು.?

Mekedatu Padayatre: ಅರ್ಧಕ್ಕೆ ಮೊಟಕುಗೊಂಡ ಪಾದಯಾತ್ರೆ, ಗೆದ್ದಿದ್ಯಾರು.? ಸೋತಿದ್ಯಾರು.?

Published : Jan 14, 2022, 06:08 PM IST

ಕೊರೋನಾ ಸೋಂಕು (Corona Virus) ಏರಿಕೆ, ಕರ್ಫ್ಯೂ ನಡುವೆಯೂ ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆ (Mekedatu Padayatre) ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು. ಹೈಕೋರ್ಟ್‌ (High Court) ಕೂಡಾ ಛಾಟಿ ಬೀಸಿತ್ತು.  

ಬೆಂಗಳೂರು (ಜ. 14): ಕೊರೋನಾ ಸೋಂಕು (Corona Virus) ಏರಿಕೆ, ಕರ್ಫ್ಯೂ ನಡುವೆಯೂ ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆ (Mekedatu Padayatre) ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು. ಹೈಕೋರ್ಟ್‌ (High Court) ಕೂಡಾ ಛಾಟಿ ಬೀಸಿತ್ತು.  ಹೈಕೋರ್ಟ್‌ನ ಕಟು ನುಡಿಗಳನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್‌ ಪಕ್ಷ ತನ್ನ ಮಹತ್ವಾಕಾಂಕ್ಷಿ ಮೇಕೆದಾಟು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಮೊಟಕುಗೊಳಿಸಿದೆ. 

ಕಾಂಗ್ರೆಸ್‌ ಹೈಕಮಾಂಡ್‌ (Congress HighCommand) ಈ ಹೋರಾಟದ ವಿಷಯದಲ್ಲಿ ಪಕ್ಷಕ್ಕೆ ಮುಜುಗರವಾಗದಂತಹ ನಿರ್ಧಾರ ಕೈಗೊಳ್ಳಿ ಎಂದು ರಾಜ್ಯ ನಾಯಕರಿಗೆ ಸೂಚ್ಯ ಸಂದೇಶ ರವಾನಿಸಿತ್ತು. ರಾಜ್ಯ ಸರ್ಕಾರ ಕೂಡ ಯಾತ್ರೆಗೆ ಮುಂದಾದರೆ ಕಠಿಣ ಕ್ರಮ ಕೈಗೊಳ್ಳುವ ಸಿದ್ಧತೆಗಳನ್ನು ನಡೆಸಿತ್ತು. ಜತೆಗೆ, ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಾತ್ರೆ ನಿಲ್ಲಿಸುವಂತೆ ಮನವಿ ಮಾಡಿ ಕಾಂಗ್ರೆಸ್‌ ನಾಯಕರಿಗೆ ಪತ್ರವನ್ನು ಬರೆದರು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಹಿರಿಯ ನಾಯಕರು ಹಾಗೂ ಶಾಸಕರ ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರವನ್ನು ಕೈಗೊಂಡರು. ಹಾಗಾದರೆ ಈ ಯುದ್ಧದಲ್ಲಿ ಗೆದ್ದಿದ್ಯಾರು..? ಸೋತಿದ್ಯಾರು..? 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more