ಮೆಡಿಕಲ್ ಕಿಟ್ ಅವ್ಯವಹಾರ: ವರುಷದ ಸಂಭ್ರಮದಲ್ಲಿದ್ದ ಬಿಜೆಪಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ ಕಾಂಗ್ರೆಸ್

Jul 27, 2020, 6:12 PM IST

ಬೆಂಗಳೂರು (ಜು. 27): ಮೆಡಿಕಲ್ ಕಿಟ್‌ನಲ್ಲಿ ಹಗರಣ ಆಗಿದೆ. ಇದರ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ವರುಷದ ಸಂಭ್ರಮದಲ್ಲಿದ್ದ ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್ ಬಿಸಿ ಮುಟ್ಟಿಸಿದೆ. ಕೆಪಿಸಿಸಿ ಕಚೇರಿಯಿಂದ ರಾಜಭವನದತ್ತ ಕೈ ನಾಯಕರು ಕಾಲ್ನಡಿಗೆಯಲ್ಲಿ ಹೋಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೆಲವರು ಪಿಪಿಇ ಕಿಟ್ ಹಾಕಿಕೊಂಡೇ ಪ್ರತಿಭಟನೆ ನಡೆಸಿದರು. 

ಬಿಜೆಪಿ ಸರ್ಕಾರಕ್ಕೆ ವರ್ಷ: ಶಾಸಕರಿಗೆ ಭರ್ಜರಿ ಗಿಫ್ಟ್‌ ನೀಡಿದ ಸಿಎಂ ಯಡಿಯೂರಪ್ಪ