ಖಾಸಗಿ ಆಸ್ಪತ್ರೆಗಳ ವಿರುದ್ಧ ಸಚಿವ ಸುಧಾಕರ್ ಗುಡುಗು..!

Jul 20, 2020, 2:23 PM IST

ಬೆಂಗಳೂರು(ಜು.20): ಕೊರೋನಾ ಹೋರಾಟದ ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳು ಪರಿಸ್ಥಿತಿಯನ್ನು ಅರಿತುಕೊಂಡು ಸಹಕಾರ ನೀಡಿದರೆ ಸರಿ ಇಲ್ಲದಿದ್ದರೆ ನಮ್ಮದೇ ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಗುಡುಗಿದ್ದಾರೆ.

ಕ್ರಮ ತೆಗೆದುಕೊಳ್ಳುವುದು ದೊಡ್ಡ ವಿಚಾರ ಅಲ್ಲ. ಆದ್ರೆ ಖಾಸಗಿ ಆಸ್ಪತ್ರೆಯ ಮುಖ್ಯಸ್ಥರು ಸಮಯ ಸಂದರ್ಭವನ್ನು ಅರ್ಥ ಮಾಡಿಕೊಳ್ಳಬೇಕು. ಇದೇ ರೀತಿ ಅಸಕಾರ ತೋರಿದರೆ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಸಚಿವ ಸುಧಾಕರ್ ಎಚ್ಚರಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಂಕು ಹೆಚ್ಚಾಗಲು ಇದೂ ಒಂದು ಕಾರಣ?

ಈಗಾಗಲೇ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರಿಗೆ ಮನವಿ ಮಾಡಿದ್ದೇವೆ ಹಾಗೆಯೇ ಸೂಚನೆಯನ್ನು ನೀಡಿದ್ದೇವೆ. ಸರ್ಕಾರ ಕ್ರಮ ಕೈಗೊಂಡರೆ ಅದಕ್ಕೆ ನಮ್ಮನ್ನು ಹೊಣೆ ಮಾಡಬೇಡಿ, ನಮ್ಮ ಜತೆ ಸಹಕರಿಸಿ ಎಂದು ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.