ಬೆಂಗಳೂರಿನ ಆಸ್ಪತ್ರೆಯಲ್ಲಿ ಸಾಕಷ್ಟು ವೆಂಟಿಲೇಟರ್ ಇಲ್ವಾ?

Jun 18, 2020, 6:18 PM IST

ಬೆಂಗಳೂರು(ಜೂ.18): ರಾಜ್ಯದಲ್ಲಿ ಕೊರೋನಾ ರಣಕೇಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹೀಗಿರುವಾಗಲೇ ತುರ್ತು ಚಿಕಿತ್ಸೆ ನೀಡಲು ಬೆಂಗಳೂರಿನಲ್ಲಿ ಸರಿಯಾಗಿ ವೆಂಟಲೇಟರ್‌ಗಳೇ ಇಲ್ಲವಾ ಎನ್ನುವ ಅನುಮಾನ ಶುರುವಾಗಿದೆ. 

ಈ ಹಿಂದೆ ಅಮೆರಿಕ, ಇಟಲಿಯಂತಹ ದೇಶಗಳಲ್ಲಿ ವೆಂಟಿಲೇಟರ್‌ ಅಭಾವದಿಂದಾಗಿ ಸಾವಿರಾರು ಮಂದಿ ಕೊನೆಯುಸಿರೆಳೆದಿದ್ದನ್ನು ನೋಡಿದ್ದೇವೆ. ರೋಗಿಗಳು ಹೆಚ್ಚಾಗುತ್ತಿದ್ದಂತೆ ಬೆಡ್ ಸಮಸ್ಯೆಗಳು ಆಗಿದ್ದನ್ನು ನೋಡಿದ್ದೆವು. ಇದೀಗ ಅಂತಹದ್ದೇ ಪರಿಸ್ಥಿತಿ ನಮ್ಮ ರಾಜ್ಯಕ್ಕೂ ಬಂದೊದಗಿದೆಯಾ ಎನ್ನುವ ಅನುಮಾನ ಶುರುವಾಗಿದೆ.

ಮಾಸ್ಕ್ ಡೇ ಗೃಹಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಿಷ್ಟು..

ಕಳೆದೊಂದು ವಾರದಲ್ಲಿ ಬೆಂಗಳೂರಿನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಕೆಸಿ ಜನರಲ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಗೆ ವೆಂಟಿಲೇಟರ್ ಅವಶ್ಯಕತೆ ಇದೆ ಎಂದು ವಿಕ್ಟೋರಿಯಾ ಆಸ್ಪತ್ರೆಗೆ ಕರೆ ಮಾಡಲಾಗುತ್ತದೆ. ಆದರೆ ವಿಕ್ಟೋರಿಯಾ ಆಸ್ಪತ್ರೆಯಿಂದ ಸಕಾರಾತ್ಮಕ ಬಂದಿಲ್ಲ. ಇದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.