Mar 17, 2020, 9:41 PM IST
ಬೆಂಗಳೂರು, [ಮಾ.17]: ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಸದ್ಯ ರಾಜ್ಯ ಆರೋಗ್ಯ ಇಲಾಖೆ ಕೊಟ್ಟ ವರದಿಯಂತೆ 11 ಕೊರೋನಾ ವೈರಸ್ ಕೇಸ್ ಪತ್ತೆಯಾಗಿವೆ.
ಕರ್ನಾಟಕದಲ್ಲಿ ಮತ್ತೊಂದು ಕೊರೋನಾ ಕೇಸ್: ರಾಜ್ಯ ಆರೋಗ್ಯ ಇಲಾಖೆ ವರದಿಯಂತೆ 11ಕ್ಕೆ ಏರಿಕೆ
ಈ ಹಿನ್ನೆಲೆಯಲ್ಲಿ ಮತ್ತೊಂದು ವಾರ ಕರ್ನಾಟಕ ಸ್ತಬ್ಧವಾಗುವ ಎಲ್ಲಾ ಸಾಧ್ಯತೆಗಳಿವೆ. ಈ ಬಗ್ಗೆ ಆರೋಗ್ಯ ಸಚಿವ ಬಿ. ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರ ಜತೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲಿದ್ದಾರೆ.