ಕೊರೋನಾವೈರಸ್ ವಿರುದ್ಧ ಹೋರಾಟದಲ್ಲಿ ಪ್ರಗತಿ ಸಾಧಿಸಿದ ಕರ್ನಾಟಕ
ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ ಈಗ 13ನೇ ಸ್ಥಾನಕ್ಕೆ
ಫಲ ಕೊಡ್ತಾ ಇದೆ ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳು
ಬೆಂಗಳೂರು (ಏ.09): ಕೊರೋನಾವೈರಸ್ ವಿರುದ್ಧ ಹೋರಾಟದಲ್ಲಿ ಕರ್ನಾಟಕ ಪ್ರಗತಿ ಸಾಧಿಸುತ್ತಿದೆ. ಒಂದು ಸಮಯದಲ್ಲಿ ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ ಈಗ 13ನೇ ಸ್ಥಾನಕ್ಕೆ ಇಳಿದಿದೆ. ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳು ಒಂದು ಮಟ್ಟದ ಯಶಸ್ಸಿಗೆ ಕಾರಣವಾಗಿವೆ.