ಬೆಂಗಳೂರಿನ ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಕೊರೋನಾ ಸೋಂಕಿತ..!

ಬೆಂಗಳೂರಿನ ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಕೊರೋನಾ ಸೋಂಕಿತ..!

Published : Apr 27, 2020, 12:02 PM ISTUpdated : Apr 27, 2020, 12:17 PM IST

ಕೊರೋನಾ ಸೋಂಕಿತ ವ್ಯಕ್ತಿಯೊಬ್ಬರು ಮಾನಸಿಕ ಖಿನ್ನತೆಯಿಂದ ಆಸ್ಪತ್ರೆಯ ಮೂರನೇ ಮಹಡಿಯಿಂದ ಕೆಳಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತಾದ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.

ಬೆಂಗಳೂರು(ಏ.27): ಚಿಕಿತ್ಸೆ ಪಡೆಯುತ್ತಿದ್ದ 56 ವರ್ಷದ ಕೊರೋನಾ ಸೋಂಕಿತ ವ್ಯಕ್ತಿಯೊಬ್ಬ ಮೂರನೇ ಮಹಡಿಯಿಂದ ಜಿಗಿದುಬಿದ್ದು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಇಂದು ಬೆಳಗ್ಗೆ(ಸೋಮವಾರ) ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಡಯಬಿಟೀಸ್ ರೋಗದಿಂದ ಬಳಲುತ್ತಿದ್ದರು. ಡಯಾಲಿಸಿಸ್‌ಗೆ ಬಂದಾಗ ಆತನಲ್ಲಿ ಕೊರೋನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಆತನನ್ನು ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಿದಾಗ ಕೊರೋನ ಸೋಂಕು ಇರುವುದು ದೃಢಪಟ್ಟಿತ್ತು. 

ಸಾಮಾನ್ಯವಾಗಿ ಕೊರೋನಾ ಚಿಕಿತ್ಸೆ ಪಡೆಯುತ್ತಿರುವವರು ರೂಂನಿಂದ ಹೊರಗೆ ಬರಲು ಸಾಧ್ಯವಾಗುವುದಿಲ್ಲ. ಆದರೆ ಈ ವ್ಯಕ್ತಿ ಹೊರಗೆ ಬಂದಿದ್ದು ಹೇಗೆ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಮೇಲ್ನೋಟಕ್ಕೆ ಆತ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. 

"

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ಕೊಡುವುದರ ಜತೆಗೆ ವೈದ್ಯರು ಕೌನ್ಸಿಲಿಂಗ್ ಕೂಡಾ ಮಾಡುತ್ತಿರುತ್ತಾರೆ. ಇದರ ಹೊರತಾಗಿಯೂ ಆತ ಆತ್ಮಹತ್ಯೆ ಮಾಡಿಕೊಂಡಿದ್ದು ಹೇಗೆ ಎನ್ನುವುದರ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ. ವಿವಿ ಪುರಂ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡು  ಪರಿಶೀಲನೆ ನಡೆಸುತ್ತಿದ್ದಾರೆ. 


 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!