ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು (ಆ.14) ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೊರೋನಾ ನಿರ್ವಹಣಾ ಸಭೆಯಲ್ಲಿ ಮಹತ್ವದ ತೀರ್ಮಾನಗಳನ್ನ ಕೈಗೊಳ್ಳಲಾಗಿದೆ.
ಬೆಂಗಳೂರು, (ಆ.14): ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು (ಆ.14) ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೊರೋನಾ ನಿರ್ವಹಣಾ ಸಭೆಯಲ್ಲಿ ಮಹತ್ವದ ತೀರ್ಮಾನಗಳನ್ನ ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ಶಾಲೆ ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್: ಸಿಎಂ ಅಧಿಕೃತ ಘೋಷಣೆ
ಬೆಂಗಳೂರಿನಲ್ಲಿ ಕೋವಿಡ್ ಮೂರನೇ ಅಲೆ ನಿಯಂತ್ರಣ ಸಂಬಂಧ ಕೋವಿಡ್ ತಾಂತ್ರಿಕ ತಜ್ಞರು, ಅಧಿಕಾರಿಗಳೊಂದಿಗೆ ಮುಂಜಾಗ್ರತಾ ಕ್ರಮಗಳ ಕುರಿತು ಗಂಭೀರ ಚರ್ಚೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, 9ರಿಂದ 12ನೇ ತರಗತಿ ವರೆಗಿನ ಶಾಲೆ ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಇನ್ನು ಸದ್ಯಕ್ಕೆ ಲಾಕ್ ಡೌನ್ ಅಥವಾ ಯಾವುದೇ ಹೊಸ ನಿಯಮಗಳ ಜಾರಿ ಬೇಡ, ಅಗತ್ಯ ಬಿದ್ದರೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸೋಣ ಎಂದು ಬೊಮ್ಮಾಯಿ ತಿಳಿಸಿದ್ದಾರೆ.