ಕೊರೊನಾ ಹೆಚ್ಚಳದಿಂದ ಕಾರ್ಮಿಕರು ಕಂಗಾಲು, ತಮ್ಮ ಊರುಗಳತ್ತ ಹೊರಟ ಜನ.!

Apr 8, 2021, 10:18 AM IST

ಬೆಂಗಳೂರು (ಏ. 08): ದೇಶಾದ್ಯಂತ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಈ ಬಾರಿಯೂ ಮೋದಿ ಏಕಾಏಕಿ ಲಾಕ್‌ಡೌನ್‌ ಘೋಷಿಸಿದರೆ ಸಂಕಷ್ಟಕ್ಕೆ ಸಿಲುಕಬಹುದು ಎಂಬ ಆತಂಕದಿಂದ ಕಾರ್ಮಿಕರು ಬೆಂಗಳೂರಿನಿಂದ ತಮ್ಮ ಊರುಗಳಿಗೆ ವಲಸೆ ಹೋಗಲು ಆರಂಭಿಸಿದ್ದಾರೆ.

2 ನೇ ದಿನಕ್ಕೆ ಕಾಲಿಟ್ಟ ಸಾರಿಗೆ ಮುಷ್ಕರ; ಎಸ್ಮಾ ಜಾರಿಗೆ ಸರ್ಕಾರ ಚಿಂತನೆ

ಪ್ರಮುಖವಾಗಿ ಉತ್ತರ ಭಾರತ ರಾಜ್ಯಗಳಾದ ಉತ್ತರ ಪ್ರದೇಶ, ಹರಿಯಾಣ, ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ, ಮಣಿಪುರ ರಾಜ್ಯಗಳ ದಿನಗೂಲಿ ನೌಕರರು, ಕೂಲಿಗಳು, ಅಸಂಘಟಿತ ಕಾರ್ಮಿಕರು, ಕಟ್ಟಡ ಕಾರ್ಮಿಕರು ಸೇರಿದಂತೆ ವಿವಿಧ ಕಸುಬುಗಳನ್ನು ನಂಬಿಕೊಂಡಿದ್ದ ಕಾರ್ಮಿಕ ವರ್ಗ ಗುಳೆ ಹೊರಟಿದೆ. ಮೂಲಗಳ ಪ್ರಕಾರ, ನಿತ್ಯ ಸಾವಿರಾರು ಮಂದಿ ಕಾರ್ಮಿಕರು ಲಭ್ಯ ರೈಲಿನಲ್ಲಿ ತಮ್ಮ ಸ್ವಂತ ರಾಜ್ಯಗಳಿಗೆ ಹಿಂತಿರುಗಿದ್ದಾರೆ.