Dec 19, 2019, 4:34 PM IST
ಬೆಂಗಳೂರು(ಡಿ. 19): ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಬೆಂಗಳೂರಿನ ಟೌನ್ ಹಾಲ್, ಮೈಸೂರು ಸರ್ಕಲ್ ಬಳಿ 144 ಸೆಕ್ಷನ್ ಜಾರಿಯಾಗಿದ್ರೂ ಪ್ರತಿಭಟನೆ ಕಿಚ್ಚು ಜೋರಾಗಿದೆ. ಅದರಲ್ಲೂ ಮಂಗಳೂರಿನಲ್ಲಿ ಕಲ್ಲು ತೂರಾಟವಾಗಿದ್ದು, ಪೊಲೀಸರು ಲಘು ಲಾಠಿ ಚಾರ್ಚ್ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಯಡಿಯೂರಪ್ಪ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ಪೊಲೀಸರಿಗೆ ಸಿಎಂ ಖಡಕ್ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ. ಹಾಗಾದ್ರೆ ಬಿಎಸ್‌ವೈ ಏನು ಹೇಳಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.