ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಿದ ಸಾಧಕರಿಗೆ ಸನ್ಮಾನ ಮಾಡಲಾಯಿತು. ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 2025ನೇ ಸಾಲಿನ ಅಂತಾರಾಷ್ಟ್ರೀಯ ಮಹಿಳಾ ಸಾಧಕರ ಪ್ರಶಸ್ತಿ ವಿತರಿಸಲಾಯಿತು.
ಬೆಂಗಳೂರು (ಅ.06): ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಿದ ಸಾಧಕರಿಗೆ ಸನ್ಮಾನ ಮಾಡಲಾಯಿತು. ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 2025ನೇ ಸಾಲಿನ ಅಂತಾರಾಷ್ಟ್ರೀಯ ಮಹಿಳಾ ಸಾಧಕರ ಪ್ರಶಸ್ತಿ ಮತ್ತು ಯುವ ಸಾಧಕರ ಪ್ರಶಸ್ತಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕೇಂದ್ರ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಹಿರಿಯ ನಟ ಸುಂದರ್ ರಾಜ್, ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಅಧ್ಯಕ್ಷ ಉಮೇಶ್, ಹಾಗೂ ಹಿರಿಯ ನಟಿ ಉಮಾಶ್ರೀ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು. ಇದು ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್‌ನ ಐದನೇ ವರ್ಷದ ಪ್ರಶಸ್ತಿ ಪ್ರಧಾನ ಸಮಾರಂಭವಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳಾ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಏಷ್ಯಾನೆಟ್ ಸುವರ್ಣನ್ಯೂಸ್ನ ಹಿರಿಯ ಪತ್ರಕರ್ತೆ ರಜನಿ ಎಂ.ಜಿ, ಹಿರಿಯ ನಟಿ ಉಮಾಶ್ರೀ ಹಾಗೂ ಕುಸುಮಾ ಸೇರಿದಂತೆ ಹಲವು ಮಹಿಳಾ ಸಾಧಕರಿಗೆ ಕೇಂದ್ರ ರಾಜ್ಯಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.