Jan 21, 2021, 9:52 AM IST
ಬೆಂಗಳೂರು (ಜ. 21): ತಿಂಗಳಿಗೊಂದು ದಿನ ಹಳ್ಳಿಗೇ ಬರುತ್ತೆ ಜಿಲ್ಲಾಧಿಕಾರಿ ಕಚೇರಿ..! ಅರೇ, ಏನಿದು ಸುದ್ದಿ ಅಂತೀರಾ..? ಹೌದು. ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇನ್ನು ಪ್ರತಿ ತಿಂಗಳ ಮೂರನೇ ಶನಿವಾರ ಗ್ರಾಮಗಳಿಗೆ ಭೇಟಿ ನೀಡಿ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸಲು ಹಾಗೂ ಫಲಾನುಭವಿಗಳ ಅರ್ಜಿ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.
ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಶಾಸಕಿ ಸೌಮ್ಯಾ ದರ್ಪ..ಹೀಗೆಲ್ಲಾ ಮಾಡೋದಾ?
ಗ್ರಾಮೀಣ ಭಾಗದ ಜನರು ಪಡಿತರ ಚೀಟಿ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಖಾತೆ ಬದಲಾವಣೆ ಸೇರಿದಂತೆ ಯಾವುದೇ ಸರ್ಕಾರಿ ಸೌಲಭ್ಯ, ಕೆಲಸಗಳಿಗಾಗಿ ಜಿಲ್ಲೆ, ತಾಲೂಕು ಕೇಂದ್ರಗಳ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ ತಿಂಗಳಲ್ಲಿ ಒಂದು ದಿನ ಹಳ್ಳಿಗಳಿಗೇ ಕಚೇರಿಗಳನ್ನು ಸ್ಥಳಾಂತರಿಸಲು ಸರ್ಕಾರ ಮುಂದಾಗಿದೆ.