ರಾಮನಗರ ಡಿಗ್ರಿ, ಪಿಜಿ ಕೇಂದ್ರಕ್ಕೆ ಆನ್‌ಲೈನ್‌ನಲ್ಲೇ ಭೂಮಿ ಪೂಜೆ ನೆರವೇರಿಸಿದ ಡಿಸಿಎಂ

Jul 27, 2020, 2:53 PM IST

ಬೆಂಗಳೂರು (ಜು. 27): ರಾಮನಗರ ಡಿಗ್ರಿ, ಪಿಜಿ ಕೇಂದ್ರಕ್ಕೆ ಆನ್‌ಲೈನ್‌ನಲ್ಲೇ ಡಿಸಿಎಂ ಅಶ್ವಥ್ ನಾರಾಯಣ್ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಸಂಭ್ರಮವನ್ನು ಹಂಚಿಕೊಳ್ಳುತ್ತಾ, ಸಿಎಂ ಸಾಧನೆಗಳ ಬಗ್ಗೆ ಶ್ಲಾಘಿಸಿದರು. 

ನಮ್ಮ ಸರ್ಕಾರ ಬಡವರು, ಶ್ರಮಿಕರು, ಮಧ್ಯಮ ವರ್ಗದವರು ಎಲ್ಲರ ಒಳಿತಿಗಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ಕೊರೊನಾ ನಿರ್ವಹಣೆ ವಿಚಾರದಲ್ಲಿಯೂ ಕರ್ನಾಟಕ ನಂಬರ್ 1 ಆಗಿದೆ. ಬಡವರ ಬಂಧು ಎನಿಸಿಕೊಂಡ ಯಡಿಯೂರಪ್ಪನವರು ರೈತರಿಗಾಗಿ ಸಾಕಷ್ಟು ಯೋಜನೆಗಳನ್ನು ತಂದಿದ್ದಾರೆ. ಅದರ ಸದುಪಯೋಗವನ್ನು ರೈತರು ಪಡೆಯುತ್ತಿದ್ದಾರೆ ಎಂದು ಡಿಸಿಎಂ ಹೇಳಿದ್ದಾರೆ.