Sep 25, 2020, 12:51 PM IST
ಬೆಂಗಳೂರು (ಸೆ. 25): ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಸಿಎಂ ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಪ್ರಮಾಣ ಹೆಚ್ಚಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಲ್ಲಿ ಸೋಂಕು ಪತ್ತೆ ಶೇ. 5 ಕ್ಕಿಂತ ಕಡಿಮೆ ಮಾಡಿ: ಪ್ರಧಾನಿ ಮೋದಿ
ಸ್ಥಳೀಯವಾಗಿ ವಾರಕ್ಕೆ ಒಂದೆರಡು ದಿನಗಳ ಕಾಲ ಲಾಕ್‌ಡೌನ್ ಮಾಡಬಹುದೇ, ಪರಿಶೀಲಿಸಿ ಎಂದು ಮೋದಿ ಸಲಹೆ ನೀಡಿದ್ದರು. ಇದರ ಪೂರಕ ಎಂಬಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಲಾಕ್‌ಡೌನ್ ಮಾಡುವುದು ಉತ್ತಮ ಎಂಬ ಧಾಟಿಯಲ್ಲಿ ಮಾತನಾಡಿದ್ದರು. ಡಿಸಿಎಂ ಅಶ್ವಥ್ ನಾರಾಯಣ್ ಮಾತನಾಡಿ, ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಆಗುವುದಿಲ್ಲ. ಸೋಂಕು ಹೆಚ್ಚಿರುವ ಕಂಟೈನ್ಮೆಂಟ್ ವಲಯದಲ್ಲಿ ಸೀಲ್‌ಡೌನ್ ಮಾಡುವ ಚಿಂತನೆ ಇದೆ ಎಂದಿದ್ದಾರೆ. ಪ್ರಧಾನಿ- ಸಿಎಂ ವಿಡಿಯೋ ಕಾನ್ಫರೆನ್ಸ್ ಬಗ್ಗೆ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ..!